ಬೆಂಗಳೂರು: ಆರ್ಸಿಬಿ ಅಭಿಮಾನಿಯೊಬ್ಬ ಐಪಿಎಲ್ (IPL 2024) ಪಂದ್ಯದ ವೇಳೆ ಕ್ರೀಸ್ಗೆ ನುಗ್ಗಿ ಕೊಹ್ಲಿ (Virat Kohli) ಕಾಲು ಹಿಡಿದ ಘಟನೆ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದಿದೆ. ಇಂದು ಆರ್ಸಿಬಿ ಮತ್ತು ಪಂಜಾಬ್ ಕಿಂಗ್ಸ್ ನಡುವೆ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ (Chinnaswamy Stadium) ರೋಚಕ ಐಪಿಎಲ್ ಪಂದ್ಯ ನಡೆಯುತ್ತಿದೆ.
A fan breached the security to meet Virat Kohli at the Chinnaswamy Stadium#RCBvsPBKS #IPL2024 #ViratKohli𓃵 pic.twitter.com/cwmbioGp8d
— Vathan Ballal (@VathanBallal) March 25, 2024
ವಿರಾಟ್ ಕೊಹ್ಲಿ ಬ್ಯಾಟಿಂಗ್ ಬರುತ್ತಿದ್ದಂತೆ ಅಭಿಮಾನಿಯೊಬ್ಬ ಹೈ ಸೆಕ್ಯೂರಿಟಿ ಮಧ್ಯೆಯೂ ಕ್ರೀಸ್ ಒಳಗಡೆ ನುಗ್ಗಿ ಕೊಹ್ಲಿ ಕಾಲು ಹಿಡಿದು ಹುಚ್ಚಾಟ ನಡೆಸಿದ್ದಾನೆ. ಕೊಹ್ಲಿ ಬರುವುದನ್ನೇ ಕಾಯುತ್ತಿದ್ದ ಅಭಿಮಾನಿ ಎಲ್ಲಾ ರೂಲ್ಸ್ಗಳನ್ನು ಮುರಿದು ಕ್ರೀಸ್ ಒಳಗಡೆ ನುಗ್ಗಿ ಏಕಾಏಕಿ ಕೊಹ್ಲಿ ಕಾಲಿಗೆ ಬಿದ್ದು ಬಳಿಕ ಅಪ್ಪಿಕೊಳ್ಳಲು ಪ್ರಯತ್ನಿಸಿದ್ದಾನೆ. ಘಟನೆ ನಡೆದ ಕೂಡಲೇ ಒಳನುಗ್ಗಿದ ಅಭಿಮಾನಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.