ಪಂಜಾಬ್ ವಿರುದ್ಧ ಆರ್ಸಿಬಿಗೆ ರೋಚಕ ಗೆಲುವು ಸಿಕ್ಕಿದ್ದು, ಕಿಂಗ್ ಕೊಹ್ಲಿ ಅಬ್ಬರಕ್ಕೆ ಧವನ್ ಪಡೆ ತತ್ತರಿಸಿ ಹೋಗಿದೆ.
ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಪಂಜಾಬ್ ಕಿಂಗ್ಸ್ ನಡುವೆ ನಡೆಯಿತು. ಈ ಪಂದ್ಯದಲ್ಲಿ ಚಿನ್ನಸ್ವಾಮಿಯ ಬ್ಯಾಟಿಂಗ್ ಪಿಚ್ ನಲ್ಲಿ ಪಂಜಾಬ್ ಬ್ಯಾಟರ್ ಗಳು ಉತ್ತಮ ಪ್ರದರ್ಶನ ನೀಡಿದರು. ಈ ಮೂಲಕ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಪಂಜಾಬ್ ಕಿಂಗ್ಸ್ ತಂಡವು ನಿಗದಿತ 20 ಓವರ್ಗೆ 6 ವಿಕೆಟ್ ನಷ್ಟಕ್ಕೆ 176 ರನ್ ಗಳಿಸಿತು. ಈ ಮೊತ್ತ ಬೆನ್ನಟ್ಟಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಕರ್ನಾಟಕದ ಮನೆಮಗನಾಗಿರುವ ವಿರಾಟ್ ಕೊಹ್ಲಿ ಅವರ ಅದ್ಭುತ ಬ್ಯಾಟಿಂಗ್ ಮೂಲಕ ನಿಗದಿತ 19.2 ಓವರ್ ಗೆ 6 ವಿಕೆಟ್ ನಷ್ಟಕ್ಕೆ 178 ರನ್ ಗಳಿಸುವ ಮೂಲಕ 4 ವಿಕೆಟ್ ಗಳ ಭರ್ಜರಿ ಗೆಲುವು ದಾಖಲಿಸಿದರು. ಈ ಮೂಲಕ ಆರ್ಸಿಬಿ ತಂಡ ಸೀಸನ್ ನ ಮೊದಲ ಗೆಲುವು ದಾಖಲಿಸಿದೆ.
ಟಾಸ್ ಗೆದ್ದು ಬೌಲಿಂಗ್ ಮಾಡಿದ ಆರ್ಸಿಬಿ ತಂಡಕ್ಕೆ ಪಂಜಾಬ್ ತಂಡ 177 ರನ್ ಗಳ ಟಾರ್ಗೆಟ್ ನೀಡಿತು. ಈ ಮೊತ್ತ ಬೆನ್ನಟ್ಟಿದ ಬೆಂಗಳೂರು ತಂಡಕ್ಕೆ ಆರಂಭದಲ್ಲಿಯೇ ನಾಯಕ ಫಾಫ್ ಡುಪ್ಲೇಸಿಸ್ ವಿಕೆಟ್ ಕಳೆದುಕೊಳ್ಳುವ ಮೂಲಕ ಸಂಕಷ್ಟಕ್ಕೆ ಸಿಲುಕಿತು. ಫಾಫ್ 3 ರನ್ ಸಿಡಿಸಿ ಔಟ್ ಆದರೆ, ಕ್ಯಾಮರೂನ್ ಗ್ರೀನ್ ಸಹ 3 ರನ್ ಗಳಿಸಿ ಪೆವೆಲಿಯನ್ ಸೇರಿದರು. ರಜತ್ ಪಾಟಿದಾರ್ ಸಹ 18 ರನ್ ಗಳಿಸಿ ಔಟ್ ಆದರೆ ಗ್ಲೇನ್ ಮ್ಯಾಕ್ಸ್ವೆಲ್ ಮತ್ತೊಮ್ಮೆ ವಿಫಲರಾಗುವ ಮೂಲಕ 3 ರನ್ ಗೆ ಪೆವೆಲಿಯನ್ ಸೇರಿದರು. ಆದರೆ ಪಂಜಾಬ್ ವಿರುದ್ಧ ಏಕಾಂಗಿಯಾಗಿ ಅಬ್ಬರಿಸಿದ ವಿರಾಟ್ ಕೊಹ್ಲಿ ಒಂದೆಡೆ ಫೋರ್ ಗಳ ಸುರಿಮಳೆಗೈದರು. ಈ ಮೂಲಕ ಕೊಹ್ಲಿ 49 ಎಸೆತದಲ್ಲಿ 11 ಫೋರ್ ಮತ್ತು 2 ಸಿಕ್ಸ್ ಮೂಲಕ 77 ರನ್ ಸಿಡಿಸಿದರು. ಅನುಜತ್ ರಾವತ್ ಸಹ ಕೇವಲ 11 ರನ್ ಗಳಿಸಿ ಎಲ್ಬಿ ಬಲೆಗೆ ಬಲಿಯಾದರು.
ಆದರೆ ಕೊಹ್ಲಿ ವಿಕೆಟ್ ಪತವಾಗುತ್ತಿದ್ದಂತೆ ಒಮ್ಮೆಲೆ ಪಂದ್ಯ ಪಂಜಾಬ್ ಕಡೆ ವಾಲಿದಂತಾಯಿತು. ಆದರೆ ಕೊನೆಯಲ್ಲಿ ದಿನೇಶ್ ಕಾರ್ತಿಕ್ ಮತ್ತು ಇಂಫ್ಯಾಕ್ಟ್ ಪ್ಲೇಯರ್ ಆಗಿದ್ದ ಮಹಿಪಾಲ್ ಲೋಮ್ರೋರ್ ಅವರ ಅದ್ಭುತ ಜೊತೆಯಾಟದ ಮೂಲಕ ತಂಡವನ್ನು ಗೆಲುವಿನ ದಡ ಸೇರಿಸಿದರು