ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್ಸಿಬಿಯ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ಬ್ಯಾಟಿಂಗ್ಗೆ ಕ್ರೀಸ್ಗೆ ಬರುತ್ತಿದ್ದಂತೆಯೇ ವ್ಯಕ್ತಿಯೊಬ್ಬ ಕ್ರೀಡಾಂಗಣದ ಗ್ರಿಲ್ ಹಾರಿ ಕ್ರೀಸ್ ಬಳಿ ಬಂದು ಕೊಹ್ಲಿಯ ಕಾಲು ಹಿಡಿದಿದ್ದ! ತಕ್ಷಣ ಆತನನ್ನು ವಶಕ್ಕೆ ಪಡೆದಿದ್ದ ಭದ್ರತಾ ಸಿಬ್ಬಂದಿ ಪೊಲೀಸರಿಗೆ ಒಪ್ಪಿಸಿದ್ದರು.
ಕಿಂಗ್ ಕೊಹ್ಲಿಯ ಅಬ್ಬರದ ಆಟಕ್ಕೆ ಟಿ 20 ಕ್ರಿಕೆಟ್ ದಾಖಲೆಗಳೆಲ್ಲಾ ಧೂಳಿಪಟ!
ಇದೀಗ ಆ ವ್ಯಕ್ತಿ ಯಾರು? ಆತ ಕ್ರಿಕೆಟ್ ಪಂದ್ಯ ವೀಕ್ಷಣೆಗೆ ಬಂದಿದ್ದು ಹೇಗೆ, ಆತನ ಉದ್ದೇಶ ಏನಿತ್ತು ಎಂಬ ಎಲ್ಲ ವಿವರವನ್ನು ಪೊಲೀಸರು ಕಲೆ ಹಾಕಿದ್ದಾರೆ. ಅಲ್ಲದೆ, ಆತನ ವಿರುದ್ಧ ಪ್ರಕರಣವನ್ನೂ ದಾಖಲಿಸಿದ್ದಾರೆ.
ಮೈದಾನಕ್ಕೆ ನುಗ್ಗಿ ಕೊಹ್ಲಿಯ ಕಾಲು ಹಿಡಿದಿದ್ದ ಅಭಿಮಾನಿಯ ವಿಚಾರಣೆ ನಡೆಸಲಾಗಿದ್ದು, ಆತ ರಾಯಚೂರಿನಿಂದ ಬಂದಿದ್ದ ಅಪ್ರಾಪ್ತ ಎಂಬುದು ತಿಳಿದುಬಂದಿದೆ. ರೈಲಿನಲ್ಲಿ ರಾಯಚೂರಿನಿಂದ ಬಂದಿದ್ದ 17 ವರ್ಷದ ಅಪ್ರಾಪ್ತ, 3000 ರೂಪಾಯಿ ಕೊಟ್ಟು ಡಿ ಬ್ಲಾಕ್ ಟಿಕೆಟ್ ಖರೀದಿ ಮಾಡಿದ್ದ. ಈತ ವಿರಾಟ್ ಕೊಹ್ಲಿಯ ಹುಚ್ಚು ಅಭಿಮಾನಿಯಾಗಿದ್ದಾನೆ
IPL 2024, PBKS vs RCB: ಕಿಂಗ್ ಕೊಹ್ಲಿ ಅಬ್ಬರ, ಪಂಜಾಬ್ ವಿರುದ್ಧ ಆರ್ಸಿಬಿಗೆ ರೋಚಕ ಗೆಲುವು!
ಮೊದಲು ಬ್ಯಾಟಿಂಗ್ ಮಾಡಿದ ಪಂಜಾಬ್ ಕಿಂಗ್ಸ್ ತಂಡ ನೀಡಿದ್ದ 177 ರನ್ಗಳ ಗೆಲುವಿನ ಗುರಿಯನ್ನು ಬೆನ್ನತ್ತಲು ಕೊಹ್ಲಿ ಹಾಗೂ ಡುಪ್ಲೆಸಿಸ್ ಕ್ರೀಸ್ಗೆ ತೆರಳುತ್ತಿದ್ದರು. ಅಷ್ಟರಲ್ಲಿ ಯುವಕ ಮೈದಾನಕ್ಕೆ ಜಿಗಿದಿದ್ದ. ಆ ಬಗ್ಗೆ ವಿಚಾರಣೆ ವೇಳೆ ಪೊಲೀಸರಿಗೆ ಮಾಹಿತಿ ನೀಡಿರುವ ಆತ, ಕೊಹ್ಲಿ ಕ್ರೀಸ್ಗೆ ಹೋಗುತ್ತಿದ್ದಂತೆ ಹಿಂಬದಿ ಸೀಟ್ನಲ್ಲಿದ್ದವರು ‘ಕೊಹ್ಲಿಯನ್ನು ಹಿಡಿದುಕೋ’ ಎಂದು ಕೂಗುತ್ತಿದ್ದರು. ಅದನ್ನು ಕೇಳಿದ ತಕ್ಷಣ ಗ್ರಿಲ್ ಹಾರಿ ಮೈದಾನದ ಒಳಗೆ ನುಗ್ಗಿದ್ದೆ ಎಂದಿದ್ದಾನೆ
ಇದೀಗ ರಾಯಚೂರಿನ ಅಪ್ರಾಪ್ತನ ಮೇಲೆ ಕಬ್ಬನ್ ಪಾರ್ಕ್ ಠಾಣೆ ಪೊಲೀಸರು ಕರ್ತವ್ಯಕ್ಕೆ ಅಡ್ಡಿ, ಮೈದಾನಕ್ಕೆ ಅತಿಕ್ರಮಣ ಪ್ರವೇಶದಡಿ ಕೇಸ್ ದಾಖಲಿಸಿದ್ದಾರೆ. ಕೇಸ್ ದಾಖಲಿಸಿಕೊಂಡು ಆತನ ವಿಚಾರಣೆ ನಡೆಸಲಾಗುತ್ತಿದೆ