ತವರು ನೆಲ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂಡವನ್ನು 4 ವಿಕೆಟ್ಗಳಿಂದ ಸೋಲಿಸಿದ ಫಾಫ್ ಪಡೆ ಪಾಯಿಂಟ್ ಪಟ್ಟಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು 6ನೇ ಸ್ಥಾನಕ್ಕೇರಿದೆ. ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಪಂಜಾಬ್ ಕಿಂಗ್ಸ್ ನಿಗದಿತ 20 ಓವರ್ಗಳಲ್ಲಿ ಆರು ವಿಕೆಟ್ ಕಳೆದುಕೊಂಡು 176 ರನ್ ಕಲೆಹಾಕಿತು.
ಪ್ರತ್ಯುತ್ತರವಾಗಿ ಗುರಿ ಬೆನ್ನಟ್ಟಿದ ಆರ್ಸಿಬಿ ಪರ ವಿರಾಟ್ ಕೊಹ್ಲಿ ಅರ್ಧಶತಕ ಬಾರಿಸಿದರೆ, ಅಂತಿಮವಾಗಿ ದಿನೇಶ್ ಕಾರ್ತಿಕ್ 10 ಎಸೆತಗಳಲ್ಲಿ ಅಜೇಯ 28 ರನ್ ಮತ್ತು ಮಹಿಪಾಲ್ ಲ್ಯಾಮ್ರೋರ್ 8 ಎಸೆತಗಳಲ್ಲಿ 17 ರನ್ ಗಳಿಸಿ ಇನ್ನು 4 ಎಸೆತಗಳು ಬಾಕಿ ಇರುವಂತೆಯೇ ತಂಡಕ್ಕೆ ಜಯ ತಂದುಕೊಟ್ಟರು.
Cutest video in the Internet…!!!
– Virat Kohli 👑👌pic.twitter.com/BPCrVRH6Jy
— Johns. (@CricCrazyJohns) March 25, 2024
ಜಯದ ಬಳಿಕ ಕೊಹ್ಲಿ ಅವರು ಮೈದಾನದಿಂದಲೇ ಪತ್ನಿ ಅನುಷ್ಕಾ ಶರ್ಮ ಅವರಿಗೆ ವಿಡಿಯೊ ಕರೆ ಮಾಡಿ ಮಾತನಾಡಿದ್ದಾರೆ. ಇದರ ಫೋಟೊ ಮತ್ತು ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಕೊಹ್ಲಿ ಅವರು ಪಂದ್ಯ ಮುಕ್ತಾಯದ ಬಳಿಕ ವಿಡಿಯೊ ಕರೆ ಮಾಡಿ ಪಂದ್ಯದಲ್ಲಿ ನಡೆದ ಸಂಗತಿಗಳನ್ನು ಪತನಿಗೆ ವಿವರಿಸಿದ್ದಾರೆ.
ಆದಾಯ ತೆರಿಗೆದಾರರ ಗಮನಿಸಿ.. ಮಾ.31 ರೊಳಗೆ ಈ ಕೆಲಸ ಕಡ್ಡಾಯ.! ಇಲ್ಲಾಂದ್ರೆ ದಂಡ ಗ್ಯಾರಂಟಿ
ಅನುಷ್ಕಾ ಶರ್ಮಾಗೆ ವಿಡಿಯೋ ಕರೆ ಮಾಡಿದ ಕಿಂಗ್ ಕೊಹ್ಲಿ ಪ್ಲೈನ್ ಕಿಸ್ ಕೊಡುವ ದೃಶ್ಯ ಕೂಡ ಅಭಿಮಾನಿಗಳ ಮೊಬೈಲ್ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಜೊತೆಗೆ ಮಗಳೊಂದಿಗೆ ಕೊಹ್ಲಿ ವಿಡಿಯೋ ಕರೆಯಲ್ಲಿ ಮಾತನಾಡಿದಂತೆ ಘೋಚರಿಸಿದೆ. ಇವರ ಈ ಪ್ರೀತಿಗೆ ನೆಟ್ಟಿಗರು ಪ್ರೀತಿ ಎಂದರೆ ಹೀಗಿರಬೇಕು ಎಂದು ಕಮೆಂಟ್ ಮಾಡಿದ್ದಾರೆ. ಪತಿಯ ಈ ಸಾಧನೆಗೆ ಪತ್ನಿ ಅನುಷ್ಕಾ ಕೂಡ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.