ಮಂಡ್ಯ: ಚನ್ನಪಟ್ಟಣದ ಕಾರ್ಯಕರ್ತರ ತೀವ್ರ ವಿರೋಧದ ನಡುವೆಯೂ ಮಂಡ್ಯದಿಂದ ಕಣಕ್ಕಿಳಿಯಲು ಕುಮಾರಸ್ವಾಮಿ ಮುಂದಾಗಿದ್ದಾರೆ. ಜೆಡಿಎಸ್ ಕೋರ್ ಕಮಿಟಿ ಸಭೆ ಕರೆದಿರುವ ಅವರು, ಸಂಜೆ ಅಧಿಕೃತ ಘೋಷಣೆ ಮಾಡಲಿದ್ದಾರೆ. ಬಿಜೆಪಿ ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಹೆಚ್ಡಿ ಕುಮಾರಸ್ವಾಮಿ ಮಂಡ್ಯದಿಂದ ಕಣಕ್ಕಿಳಿಯುವುದು ಬಹುತೇಕ ಖಚಿತ ಎಂದು ಪಕ್ಷದ ಉನ್ನತ ಮೂಲಗಳು ತಿಳಿಸಿವೆ.
ಆದಾಯ ತೆರಿಗೆದಾರರ ಗಮನಿಸಿ.. ಮಾ.31 ರೊಳಗೆ ಈ ಕೆಲಸ ಕಡ್ಡಾಯ.! ಇಲ್ಲಾಂದ್ರೆ ದಂಡ ಗ್ಯಾರಂಟಿ
ಕುಮಾರಸ್ವಾಮಿ ಮಂಡ್ಯದಿಂದ ಕಣಕ್ಕಿಳಿದರೆ ಚನ್ನಪಟ್ಟಣದಲ್ಲಿ ಕಾರ್ಯಕರ್ತರ ಉತ್ಸಾಹ ಕಡಿಮೆಯಾಗ ಬಹುದು. ಪರಿಣಾಮವಾಗಿ ರಾಮನಗರದ ಮೇಲಿನ ಹಿಡಿತ ಕಳೆದುಕೊಳ್ಳಬೇಕಾಗಬಹುದು ಎಂಬ ಆತಂಕ ಜೆಡಿಎಸ್ಗಿದೆ. ಆದಾಗ್ಯೂ, ಮಂಡ್ಯದಲ್ಲಿ ನಿಖಿಲ್ರನ್ನು ಕಣಕ್ಕಿಳಿಸಿದರೆ ಕುಮಾರಸ್ವಾಮಿಯಷ್ಟು ಪ್ರಭಾವ ಬೀರುವುದು ಕಷ್ಟ ಎಂಬ ಅಭಿಪ್ರಾಯವೂ ವ್ಯಕ್ತವಾಗಿದೆ. ಹೀಗಾಗಿ ಅಳೆದೂ ತೂಗಿ ಅಂತಿಮವಾಗಿ ಕುಮಾರಸ್ವಾಮಿ ಮಂಡ್ಯದಿಂದ ಕಣಕ್ಕಿಳಿಯಲು ಮುಂದಾಗಿದ್ದಾರೆ.