ಬೆಂಗಳೂರು: ಬ್ಯಾಟಿಂಗ್ನಲ್ಲಿ ಹಲವು ವಿಶೇಷ ದಾಖಲೆಗಳನ್ನು ಬರೆದಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಮಾಜಿ ನಾಯಕ ವಿರಾಟ್ ಕೊಹ್ಲಿ ಇದೀಗ ಫೀಲ್ಡಿಂಗ್ನಲ್ಲಿ ನೂತನ ಮೈಲುಗಲ್ಲು ಸ್ಥಾಪಿಸಿದ್ದಾರೆ. ಟಿ20 ಕ್ರಿಕೆಟ್ನಲ್ಲಿ ಅತಿ ಹೆಚ್ಚು ಕ್ಯಾಚ್ಗಳನ್ನು ಪಡೆದ ಮೊದಲ ಭಾರತೀಯ ಆಟಗಾರ ಎಂಬ ದಾಖಲೆಯನ್ನು ಬರೆಯುವ ಮೂಲಕ ಕೊಹ್ಲಿ, ಮಾಜಿ ಆಟಗಾರ ಸುರೇಶ್ ರೈನಾ ಅವರನ್ನು ಹಿಂದಿಕ್ಕಿದ್ದಾರೆ.
ಸೋಮವಾರ ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರಿಕೆಟ್ ಕ್ರೀಡಾಂಗಣದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಪಂಜಾಬ್ ಕಿಂಗ್ಸ್ ನಡುವಣ 2024ರ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಟೂರ್ನಿಯ ಆರನೇ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಈ ದಾಖಲೆಯನ್ನು ಬರೆದಿದ್ದಾರೆ.
ಪಂಜಾಬ್ ಕಿಂಗ್ಸ್ ವಿರುದ್ದ ಕೇವಲ 10 ಎಸೆತಗಳಲ್ಲಿ 32 ರನ್ ಸಿಡಿಸಿದ ಪೊರೆಲ್: ಯಾರೀತ?
ಟಿ20 ಕ್ರಿಕೆಟ್ನಲ್ಲಿ ಒಟ್ಟಾರೆಯಾಗಿ ವೆಸ್ಟ್ ಇಂಡೀಸ್ ಮಾಜಿ ನಾಯಕ ಕೈರೊನ್ ಪೊಲಾರ್ಡ್ ಅವರು 362 ಕ್ಯಾಚ್ಗಳ ಮೂಲಕ ಅಗ್ರ ಸ್ಥಾನವನ್ನು ಅಲಂಕರಿಸಿದ್ದಾರೆ. 290 ಕ್ಯಾಚ್ಗಳ ಮೂಲಕ ದಕ್ಷಿಣ ಆಫ್ರಿಕಾ ಆಟಗಾರ ಡೇವಿಡ್ ಮಿಲ್ಲರ್ ಎರಡನೇ ಸ್ಥಾನದಲ್ಲಿದ್ದಾರೆ. ವೆಸ್ಟ್ ಇಂಡೀಸ್ ಮಾಜಿ ಆಲ್ರೌಂಡರ್ ಡ್ವೇನ್ ಬ್ರಾವೊ ಅವರು 271 ಕ್ಯಾಚ್ಗಳ ಮೂಲಕ ಮೂರನೇ ಸ್ಥಾನದಲ್ಲಿದ್ದಾರೆ.
ರಾಯಲ್ ಚಾಲೆಂಜರ್ಸ್ ಬೆಂಗಳೂರು : ಫಾಫ್ ಡು ಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ, ರಜತ್ ಪಾಟಿದಾರ್, ಗ್ಲೆನ್ ಮ್ಯಾಕ್ಸ್ವೆಲ್, ಕ್ಯಾಮೆರಾನ್ ಗ್ರೀನ್, ದಿನೇಶ್ ಕಾರ್ತಿಕ್, ಅನುಜ್ ರಾವತ್ (ವಿ.ಕೀ), ಅಲ್ಜಾರಿ ಜೋಸೆಫ್, ಮಯಾಂಕ್ ದಾಗರ್, ಮೊಹಮ್ಮದ್ ಸಿರಾಜ್, ಯಶ್ ದಯಾಳ್
ಪಂಜಾಬ್ ಕಿಂಗ್ಸ್ : ಶಿಖರ್ ಧವನ್ (ನಾಯಕ), ಜಾನಿ ಬೈರ್ಸ್ಟೋವ್, ಪ್ರಭಾಸಿಮ್ರಾನ್ ಸಿಂಗ್, ಸ್ಯಾಮ್ ಕರನ್, ಜಿತೇಶ್ ಶರ್ಮಾ (ವಿ.ಕೀ), ಲಿಯಾಮ್ ಲಿವಿಂಗ್ಸ್ಟೋನ್, ಶಶಾಂಕ್ ಸಿಂಗ್, ಹರ್ಪ್ರೀತ್ ಬ್ರಾರ್, ಹರ್ಷಲ್ ಪಟೇಲ್, ಕಗಿಸೊ ರಬಾಡ, ರಾಹುಲ್ ಚಾಹರ್.