ಹುಬ್ಬಳ್ಳಿ : ರಾಜ್ಯಕ್ಕೆ ಕೇಂದ್ರದಿಂದ ಯುಪಿಎ ಕಾಲದಲ್ಲಿ ಎಷ್ಟು ಹಾಗೂ ಎನ್ಡಿಎ ಕಾಲದಲ್ಲಿ ಎಷ್ಟು ಎನ್ಡಿಆರ್ ಎಫ್ ಹಣ ಬಂದಿದೆ ಅನ್ನುವುದನ್ನು ರಾಜ್ಯ ಸರ್ಕಾರ ಬಹಿರಂಗ ಪಡಿಸಲಿ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸವಾಲು ಹಾಕಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು,
ಆದಾಯ ತೆರಿಗೆದಾರರ ಗಮನಿಸಿ.. ಮಾ.31 ರೊಳಗೆ ಈ ಕೆಲಸ ಕಡ್ಡಾಯ.! ಇಲ್ಲಾಂದ್ರೆ ದಂಡ ಗ್ಯಾರಂಟಿ
ರಾಜ್ಯ ಸರ್ಕಾರ ಅಧೋಗತಿಗೆ ಹೋಗಿದೆ. ಅದೇ ಕಾರಣಕ್ಕೆ ಸುಪ್ರೀಂ ಕೋರ್ಟ್ಗೆ ಹೋಗಿದ್ದಾರೆ. ಸುಪ್ರೀಂ ಕೋರ್ಟ್ಗೆ ಹೋಗಿರುವುದು ರಾಜಕೀಯ ತಂತ್ರಗಾರಿಕೆ. ರಾಜ್ಯ ಸರ್ಕಾರ ಕೇಂದ್ರದಿಂದ ಹಣ ಬಂದಿಲ್ಲ ಎಂದು ಹೇಳುವುದನ್ನು ಬಿಟ್ಟು, ಯುಪಿಎ ಅವಧಿಯಲ್ಲಿ ಹಾಗೂ ಎನ್ ಡಿಎ ಅವಧಿಯಲ್ಲಿ ಎನ್ ಡಿ ಆರ್ ಎಫ್ ನಿಧಿಯಿಂದ ಎಷ್ಟು ಹಣ ಬಂದಿದೆ ಎಂದು ಬಹಿರಂಗಪಡಿಸಲಿ ಎಂದು ಆಗ್ರಹಿಸಿದರು.
ಇದೇ ವೇಳೆ ಮೋದಿ ಮೋದಿ ಎಂದು ಕೂಗುವ ಯುವಕರಿಗೆ ಕಪಾಳಕ್ಕೆ ಹೊಡೆಯಿರಿ ಎಂದು ಸಚಿವ ಶಿವರಾಜ್ ತಂಗಡಗಿ ನೀಡಿರುವ ಹೇಳಿಕೆಗೆ ತಿರುಗೇಟು ನೀಡಿದ ಅವರು, ಇನ್ನು ಸ್ವಲ್ಪ ದಿನ ತಾಳಿ, ಮತಗಳ ಮೂಲಕ ಜನ ಪರೋಕ್ಷವಾಗಿ ಕಾಂಗ್ರೆಸ್ ಗೆ ಕಪಾಳಕ್ಕೆ ಹೊಡೆಯುತ್ತಾರೆ ಎಂದು ಹೇಳಿದರು ಇನ್ನು, ರಾಜ್ಯದಲ್ಲಿ ವಾತಾವರಣ ಉತ್ತಮವಾಗಿದೆ. ಎಲ್ಲ ಕಡೆ ಮೋದಿ ಪರ ಅಲೆ ಇದೆ. ರಾಜ್ಯದಲ್ಲಿ ಭಿನ್ನಮತ ಶಮನ ಆಗುತ್ತಿದೆ. ಸಂಗಣ್ಣ ಕರಡಿ ಅವರು ಸಮಾಧಾನ ಆಗಿದ್ದಾರೆ.