ಬೆಂಗಳೂರು: ರಾಮೇಶ್ವರಂ ಕೆಫೆಯಲ್ಲಿ ಸಂಭವಿಸಿದ್ದ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಗ್ ಅಪ್ ಡೇಟ್ ಸಿಕ್ಕಿದ್ದು ಇದೀಗ ಬೆಂಗಳೂರು ಮೂಲದ ಇಬ್ಬರು ಅನುಮಾನಿತರನ್ನು ಎನ್ಐಎ ವಿಚಾರಣೆ ನಡೆಸಿದೆ ಎಂಬ ಮಾಹಿತಿ ಲಭ್ಯವಾಗಿದೆ.
Tecchi Suicide: ಪತ್ನಿಯ ಅಕ್ರಮ ಸಂಬಂಧಕ್ಕೆ ಬೇಸತ್ತು ಟೆಕ್ಕಿ ಆತ್ಮಹತ್ಯೆ: ಮಕ್ಕಳ ಜೊತೆ ಮಹಿಳೆ ಪರಾರಿ!
ಶಂಕಿತ ಬಾಂಬರ್ ಜೊತೆಗೆ ಸಂಪರ್ಕವನ್ನು ಹೊಂದಿದ್ದ ಶಂಕೆಯ ಮೇರೆಗೆ ಬೆಂಗಳೂರು ಮೂಲದ ಇಬ್ಬರು ಅನುಮಾನಿತರನ್ನ ಎನ್ ಐಎ ವಿಚಾರಣೆ ಮಾಡುತ್ತಿದೆ. ಶನಿವಾರ ಸಂಜೆ ಅನುಮಾನಿತರನ್ನು ಎನ್ಐಎ ವಶಕ್ಕೆ ಪಡೆದುಕೊಂಡಿದ್ದು, ಇಬ್ಬರಿಂದ ಬಾಂಬರ್ ಕುರಿತು ಎನ್ಐಎ ಅಧಿಕಾರಿಳು ಮಾಹಿತಿ ಸಂಗ್ರಹ ಮಾಡ್ತಿದ್ದಾರೆ. ಅನುಮಾನಿತರನ್ನು ಕೇವಲ ವಿಚಾರಣೆ ನಡೆಸುತ್ತಿದ್ದು, ಬಂಧಿಸಿಲ್ಲ ಎಂದು ಎನ್ಐಎ ಮೂಲಗಳು ಮಾಹಿತಿ ನೀಡಿವೆ.
ಈ ಇಬ್ಬರು ಬಾಂಬರ್ ಜೊತೆ ನೇರ ಸಂಪರ್ಕದಲ್ಲಿದ್ದರು ಎಂಬುವುದು ತನಿಖೆಯಲ್ಲಿ ತಿಳಿದು ಬಂದಿದೆ. ಸದ್ಯ ಅಧಿಕಾರಿಗಳು ಇಬ್ಬರನ್ನು ವಿಚಾರಣೆ ನಡೆಸುತ್ತಿದ್ದಾರೆ.
ಇನ್ನೂ ರಾಮೇಶ್ವರಂ ಕೆಫೆಯಲ್ಲಿ ಸಂಭವಿಸಿದ್ದ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ದಳ ಅಧಿಕಾರಿಗಳು ಬೆಂಗಳೂರು ಮೂಲದ ಇಬ್ಬರನ್ನು ಶನಿವಾರ ಸಂಜೆ ವಶಕ್ಕೆ ಪಡೆದುಕೊಂಡಿದ್ದಾರೆ.