ಚಿಕ್ಕಮಗಳೂರು:- ಜಿಲ್ಲೆಯ ತರಿಕೆರೆ ತಾಲೂಕಿನ ಎಂ.ಸಿ. ಹಳ್ಳಿ ಚೆಕ್ ಪೋಸ್ಟ್ ಬಳಿ ದಾಖಲೆ ಇಲ್ಲದೇ ಸಾಗಿಸುತ್ತಿದ್ದ ನಾಲ್ಕು ಕೋಟಿ ಮೌಲ್ಯದ ಚಿನ್ನ, ವಜ್ರ ಬೆಳ್ಳಿ ವಶಕ್ಕೆ ಪಡೆದ ಘಟನೆ ಸಂಭವಿಸಿದೆ.
ಭಾರತ್ ಮಾತಾ ಕೀ ಜೈ ಎಂಬ ಘೋಷಣೆ ಹುಟ್ಟುಹಾಕಿದವರು ಮುಸ್ಲೀಮರು – ಕೇರಳ ಸಿಎಂ !
6 ಕೆಜಿ 586 ಗ್ರಾಂ ಚಿನ್ನ, 1 ಕೆಜಿ 71.492 ಗ್ರಾಂ ವಜ್ರಾಭರಣ, 1 ಕೆಜಿ ಬೆಳ್ಳಿ ವಸ್ತುಗಳನ್ನು ಚೆಕ್ ಪೋಸ್ಟ್ ಸಿಬ್ಬಂದಿ ವಶಕ್ಕೆ ಪಡೆದಿದ್ದಾರೆ.
ಎಂ.ಸಿ. ಹಳ್ಳಿ ಚೆಕ್ ಪೋಸ್ಟ್ ಬಳಿ ಪೊಲೀಸರು ವಾಹನಗಳನ್ನು ತಪಾಸಣೆ ನಡೆಸುತ್ತಿದ್ದರು. ಈ ವೇಳೆ ಬಂದ ಒಂದು ಕಾರು ಪೊಲೀಸರಿಗೆ ಅನುಮಾನ ಹುಟ್ಟಿಸಿದೆ. ಹೀಗಾಗಿ ಕಾರನ್ನು ತಡೆದು ಪರಿಶೀಲನೆ ನಡೆಸಿದಾಗ ಕೋಟ್ಯಂತರ ಮೌಲ್ಯದ ಚಿನ್ನಾಭರಣಗಳು ಪತ್ತೆಯಾಗಿವೆ. ಸಾಗಿಸಲಾಗುತ್ತಿದ್ದ ಚಿನ್ನ, ಬೆಳ್ಳಿ, ಡೈಮಂಡ್ಗಳ ದಾಖಲೆಗಳನ್ನು ಕೇಳಿದಾಗ ಸಂಬಂಧಪಟ್ಟವರು ದಾಖಲೆ ನೀಡಿಲ್ಲ