ಬೆಂಗಳೂರು:- ಜೆಡಿಎಸ್ ನಾಯಕ, ರಾಜ್ಯದ ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಅವರನ್ನು ಶ್ರೀಕ್ಷೇತ್ರ ಆದಿಚುಂಚನಗಿರಿಯ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಇಂದು ಭೇಟಿಯಾಗಿ ಆರೋಗ್ಯ ವಿಚಾರಿಸಿದರು.
ಹೃದಯ ಶಸ್ತ್ರಚಿಕಿತ್ಸೆ ಬಳಿಕ ಸುಧಾರಿಸಿಕೊಳ್ಳುತ್ತಿರುವ HD ಕುಮಾರಸ್ವಾಮಿ ಅವರನ್ನು ನಿರ್ಮಲಾನಂದನಾಥ ಶ್ರೀ ಭೇಟಿ ಆಗಿ ಬೇಗ ಗುಣಮುಖರಾಗಲೆಂದು ಹಾರೈಸಿದ್ದಾರೆ.
ಈ ಸಂದರ್ಭದಲ್ಲಿ ಶ್ರೀ ಸೌಮ್ಯನಾಥ ಸ್ವಾಮೀಜಿ ಅವರು, ಶ್ರೀ ನಿಖಿಲ್ ಕುಮಾರಸ್ವಾಮಿ ಮುಂತಾದವರು ಉಪಸ್ಥಿತರಿದ್ದರು.