ಇಂದು ಬುಧವಾರ ಚಿನ್ನ ಮತ್ತು ಬೆಳ್ಳಿ ಬೆಲೆಗಳು ಎರಡೂ ಇಳಿದಿವೆ.
ಚಿನ್ನದ ಬೆಲೆ ಗ್ರಾಮ್ಗೆ 10 ರೂನಷ್ಟು ಕಡಿಮೆ ಆಗಿದೆ. ಬೆಳ್ಳಿ ಬೆಲೆ ಗ್ರಾಮ್ಗೆ 30 ಪೈಸೆ ತಗ್ಗಿದೆ. ಫೆಡರಲ್ ರಿಸರ್ವ್ ನೀತಿ ಘೋಷಣೆಗೆ ಮುನ್ನ ವಿಪರೀತ ವ್ಯತ್ಯಯ ಕಂಡಿದ್ದ ಚಿನ್ನದ ಬೆಲೆ ಈಗ ಕೋರ್ಸ್ ಕರೆಕ್ಷನ್ ಹಾದಿಯಲ್ಲಿದೆ. ಆದರೂ ಕೂಡ ಬಹಳಷ್ಟು ಹೂಡಿಕೆದಾರರಿಗೆ ಸುರಕ್ಷಿತ ಹೂಡಿಕೆಯಾಗಿ ಚಿನ್ನ ಪ್ರಧಾನವಾಗಿದೆ. ಹೀಗಾಗಿ, ಅದರ ಬೆಲೆ ತುಸು ಹೆಚ್ಚಿನ ಮಟ್ಟದಲ್ಲೇ ಇರಲಿದೆ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 61,150 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 66,710 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,750 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 61,150 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 7,650 ರುಪಾಯಿಯಲ್ಲಿ ಇದೆ.
ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಮಾರ್ಚ್ 27ಕ್ಕೆ)
22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 61,150 ರೂ
24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 66,710 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 775 ರೂ
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 61,150 ರೂ
24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 66,710 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 765 ರೂ