ನಟಿ ತ್ರಿಶಾ ಕೃಷ್ಣನ್ ಸದ್ಯ ಸೌತ್ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. 40 ವರ್ಷದ ಈ ನಟಿಗೆ ಸಾಕಷ್ಟು ಡಿಮ್ಯಾಂಡ್ ಇದ್ದು ಟಾಪ್ ಹೀರೋಗಳ ಜೊತೆ ತ್ರಿಶಾ ಸ್ಕ್ರೀನ್ ಶೇರ್ ಮಾಡ್ತಿದ್ದಾರೆ. ಹೀಗಿರುವಾಗ ಬಾಲಿವುಡ್ ಚಿತ್ರಗಳಲ್ಲಿ ನಟಿಸದಿರಲು ಕಾರಣವೇನು ಎಂಬುದನ್ನು ತ್ರಿಶಾ ತಿಳಿಸಿದ್ದಾರೆ.
ಅಕ್ಷಯ್ ಕುಮಾರ್ ನಟನೆಯ ‘ಖಟ್ಟಾ ಮಿಟ್ಟಾ’ ಸಿನಿಮಾದಲ್ಲಿ ತ್ರಿಶಾ ನಟಿಸಿದ್ದರು. ಖಟ್ಟಾ ಮಿಟ್ಟಾ ಸಿನಿಮಾ ಹೀನಾಯವಾಗಿ ಸೋತಿತ್ತು. ಹಿಂದಿ ಅಭಿಮಾನಿಗಳ ಮನಸ್ಸಿನಲ್ಲಿ ಜಾಗ ಪಡೆಯೋದ್ರಲ್ಲಿ ನಾನು ಸೋತೆ ಎಂದಿದ್ದಾರೆ. ಹಾಗಾಗಿ ಅದೇ ನನ್ನ ಮೊದಲ ಮತ್ತು ಕೊನೆಯ ಚಿತ್ರವಾಗಿದೆ. ಹಾಗಾಗಿ ನಾನು ಬಾಲಿವುಡ್ನಲ್ಲಿ ಸಿನಿಮಾ ಮಾಡುವುದು ಬಿಟ್ಟೆ ಎಂದು ತ್ರಿಶಾ ಸಂದರ್ಶನವೊಂದರಲ್ಲಿ ತಿಳಿಸಿದ್ದಾರೆ.
‘ಪೊನ್ನಿಯನ್ ಸೆಲ್ವನ್’ ಚಿತ್ರದ ಸಕ್ಸಸ್ ನಂತರ ಬ್ಯಾಕ್ ಟು ಬ್ಯಾಕ್ ಸಿನಿಮಾಗಳಲ್ಲಿ ತ್ರಿಶಾ ತೊಡಗಿಸಿಕೊಂಡಿದ್ದಾರೆ. ಈ ಮಧ್ಯೆ ಬಾಲಿವುಡ್ ಸಿನಿಮಾಗಳಿಂದಲೂ ಆಫರ್ ಬರ್ತಿವೆ. ಆದರೆ ತ್ರಿಶಾ ಅವುಗಳನ್ನು ನಯವಾಗಿಯೇ ತಿರಸ್ಕರಿಸಿದ್ದಾರೆ. ಸದ್ಯ ಮೆಗಾಸ್ಟಾರ್ ಚಿರಂಜೀವಿ ನಟನೆಯ ‘ವಿಶ್ವಾಂಭರ’ ಸಿನಿಮಾದಲ್ಲಿ ತೊಡಗಿಕೊಂಡಿದ್ದು ಚಿತ್ರದ ಶೂಟಿಂಗ್ ನಡೆಯುತ್ತಿದೆ.