ಬೆಂಗಳೂರು:- ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮಾ. 31 ರಿಂದ ಮಳೆ ಆಗಲಿದೆ ಎಂದು ಭಾರತೀಯ ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ.
ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಉತ್ತರ ಕನ್ನಡ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಒಣಹವೆ ಇರಲಿದೆ.
Breaking News: ಅಕ್ರಮ ಆಸ್ತಿ ಗಳಿಕೆ ಆರೋಪ – ರಾಜ್ಯದ ಈ ಜಿಲ್ಲೆಗಳಲ್ಲಿ ಲೋಕಾಯುಕ್ತ ದಾಳಿ!
ಬಾಗಲಕೋಟೆಯಲ್ಲಿ 39.9 ಡಿಗ್ರಿ ಸೆಲ್ಸಿಯಸ್ ಅತ್ಯಂತ ಗರಿಷ್ಠ ಉಷ್ಣಾಂಶ ದಾಖಲಾಗಿದೆ, ಚಾಮರಾಜನಗರದಲ್ಲಿ 18.0 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಬೆಂಗಳೂರಿನಲ್ಲಿ ಭಾಗಶಃ ಮೋಡಕವಿದ ವಾತಾವರಣವಿರಲಿದ್ದು, ಎಚ್ಎಎಲ್ನಲ್ಲಿ 34.9 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 35.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 35.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 35.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ
ಗದಗದಲ್ಲಿ 38.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 37.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.