ಬೆಂಗಳೂರು: ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಪಕ್ಷಗಳು ಚುನಾವಣಾ ಪ್ರಚಾರದಲ್ಲಿ ತೊಡಗಿದೆ. ಯಾರೊಬ್ಬರು ಕೂಡಾ ಕಾವೇರಿ ನೀರಿನ ಬಗ್ಗೆ ಪ್ರಸ್ತಾಪ ಮಾಡುತ್ತಿಲ್ಲ. ಹೀಗಾಗಿ ಚುನಾವಣೆ ಮುಂದೂಡುವಂತೆ ಕೇಂದ್ರ ಚುನಾವಣಾ ಆಯೋಗಕ್ಕೆ ಹೋರಾಟಗಾರ ವಾಟಾಳ್ ನಾಗರಾಜ್ ಆಗ್ರಹಿಸಿದ್ದಾರೆ.
ನೀರಿಗಾಗಿ ಆಗ್ರಹಿಸಿ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಕನ್ನಡಪರ ಸಂಘಟನೆಗಳಿಂದ ಮೈಸೂರ್ ಬ್ಯಾಂಕ್ ವೃತ್ತದಲ್ಲಿ ಖಾಲಿ ಕೊಡ ಹಿಡಿದು ಪ್ರತಿಭಟನೆ ಮಾಡಲಾಗಿದೆ. ಈ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ನೀರಿಲ್ಲ. ಎಲ್ಲೆಡೆ ಹಾಹಾಕಾರ ಶುರುವಾಗಿದೆ. ಹೀಗೆ ಮುಂದುವವರಿದರೆ ಕರ್ನಾಟಕ ಬಂದ್ ಮಾಡುತ್ತೇವೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸುಮಲತಾ ಅಂಬರೀಶ್ʼಗೆ ಬೇರೆ ಅವಕಾಶ ಇದೆ, ಸಮಾಧಾನದಿಂದ ಇರಲಿ: ಯಡಿಯೂರಪ್ಪ!
ಪ್ರಾಧಿಕಾರ, ನಿರ್ವಹಣಾ ಸಮಿತಿ ತಮಿಳುನಾಡಿಗೆ ನೀರು ಹರಿಸಿದೆ. ಬೆಂಗಳೂರಲ್ಲಿ ಕುಡಿಯಲು ನೀರಿಲ್ಲ, ನೀರಿಗೆ ಹಾಹಾಕಾರ ಶುರುವಾಗಿದೆ. ಯಾರೊಬ್ಬರು ಕೂಡಾ ಕಾವೇರಿ ನೀರಿನ ಬಗ್ಗೆ ಪ್ರಸ್ತಾಪ ಮಾಡುತ್ತಿಲ್ಲ. ಹೀಗೆ ಮುಂದುವವರಿದರೆ ಕರ್ನಾಟಕ ಬಂದ್ ಮಾಡುತ್ತೇವೆ ಎಂದು ಹೇಳಿದ್ದಾರೆ.