ಉತ್ತರ ಕನ್ನಡ : ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಯ ವಿವಿಧ ದೇವಾಲಯಗಳಲ್ಲಿ ಪೂಜೆ ಸಲ್ಲಿಸುತ್ತಿದ್ದಾರೆ. “ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ನಾಳೆಯಿಂದ ನಾಮಪತ್ರ ಸಲ್ಲಿಕೆ ಆರಂಭವಾಗಲಿದ್ದು, ನಮ್ಮ ಚುನಾವಣಾ ಪ್ರಚಾರ ಕೂಡ ಆರಂಭಿಸುತ್ತಿದ್ದೇವೆ. ಹೀಗಾಗಿ ನಿನ್ನೆ ಧರ್ಮಸ್ಥಳ, ಶೃಂಗೇರಿ, ಕುಕ್ಕೆ ಸುಬ್ರಮಣ್ಯ, ಕೊಲ್ಲೂರು ಮೂಕಾಂಬಿಕೆ, ಇಡುಗುಂಜಿ ದೇವಾಲಯಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದ್ದೆ.
ಇಂದು ಗೋಕರ್ಣದಲ್ಲಿ ಪೂಜೆ ಸಲ್ಲಿಸಿ ಮೈಸೂರಿಗೆ ತೆರಳುತ್ತಿದ್ದೇನೆ” ಎಂದು ತಿಳಿಸಿದರು. ಆತ್ಮಲಿಂಗ ಕ್ಷೇತ್ರವಾದ ಗೋಕರ್ಣ ಮಹಾಬಲೇಶ್ವರ ದೇವಾಲಯದಲ್ಲಿ ಡಿ.ಕೆ.ಶಿವಕುಮಾರ್ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಆ ವೇಳೆ, ದೇವಾಲಯದ ಅರ್ಚಕರೇ ಡಿ.ಕೆ.ಶಿವಕುಮಾರ್ ಮುಂದೆ ಮುಖ್ಯಮಂತ್ರಿ ಆಗಲೆಂದು ಅರ್ಚನೆ ನಡೆಸಿ, ಪೂಜೆ ಸಲ್ಲಿಸಿದ್ದಾರೆ. ಈ ಬಗ್ಗೆ ಮಾಧ್ಯಮಗಳ ಪ್ರಶ್ನೆಗೆ ಡಿಕೆಶಿ ಉತ್ತರಿಸಿದ್ದಾರೆ.
Cucumber: ಬೇಸಿಗೆಯಲ್ಲಿ ಸೌತೆಕಾಯಿ ತಿಂದರೆ ಇಷ್ಟೆಲ್ಲಾ ಲಾಭಗಳಿದ್ಯಾ..? ಇಲ್ಲಿದೆ ಫುಲ್ ಡೀಟೇಲ್ಸ್
“ ಅರ್ಚಕರು ಕೇಳುವುದರಲ್ಲಿ ತಪ್ಪೇನಿದೆ. ಅವರ ಆಸೆ ಅವರು ಕೇಳಿದ್ದಾರೆ. ಈಗ ರಾಜ್ಯದ ಮುಖ್ಯಮಂತ್ರಿ ಯಾಗಿ ಸಿದ್ದರಾಮಯ್ಯ ಇದ್ದಾರೆ. ಅವರ ಕೆಳಗೆ ಉಪಮುಖ್ಯಮಂತ್ರಿಯಾಗಿ, ಪಕ್ಷದ ಅಧ್ಯಕ್ಷನಾಗಿ ಕೆಲಸ ಮಾಡುತ್ತಿದ್ದೇನೆ. ಯಾರು ಏನೇ ಆಸೆ ಪಟ್ಟರು ಅಂತಿಮವಾಗಿ ಪಕ್ಷ ತೀರ್ಮಾನ ಮಾಡಲಿದೆ” ಎಂದು ಡಿ.ಕೆ.ಶಿವಕುಮಾರ್ ಅರ್ಚಕರ ಕ್ರಮವನ್ನು ಸಮರ್ಥಿಸಿಕೊಂಡಿದ್ದಾರೆ.