ಚಿಕ್ಕಮಗಳೂರು: “ನಮ್ಮ ಗ್ಯಾರಂಟಿ ಯೋಜನೆಗಳಿಗೆ ಐದು ವರ್ಷಗಳ ವಾರಂಟಿ ಇದೆ. ಇದಕ್ಕೆ ಅಗತ್ಯವಾದ ಅನುದಾನವನ್ನು ಬಜೆಟ್ ನಲ್ಲಿ ಇಡಲಾಗಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಶಿವಕುಮಾರ್ ಅವರು, “ಫ್ಯಾನ್, ಕುಕ್ಕರ್ ಗಳಿಗೆ ಒಂದು ವರ್ಷದ ವಾರಂಟಿ ಇದ್ದರೆ, ನಮಗೆ ಜನ ಐದು ವರ್ಷಗಳ ವಾರಂಟಿ ನೀಡಿದ್ದಾರೆ. ಈ ವಾರಂಟಿಯನ್ನು 10 ವರ್ಷಗಳಿಗೆ ನೀಡುವಂತೆ ದೇವಾಲಯಗಳಿಗೆ ಭೇಟಿ ನೀಡಿ ಪ್ರಾರ್ಥಿಸುತ್ತಿದ್ದೇನೆ ” ಎಂದರು.
Cucumber: ಬೇಸಿಗೆಯಲ್ಲಿ ಸೌತೆಕಾಯಿ ತಿಂದರೆ ಇಷ್ಟೆಲ್ಲಾ ಲಾಭಗಳಿದ್ಯಾ..? ಇಲ್ಲಿದೆ ಫುಲ್ ಡೀಟೇಲ್ಸ್
ಪ್ರಯತ್ನ ವಿಫಲವಾಗಬಹುದು, ಆದರೆ ಪ್ರಾರ್ಥನೆ ವಿಫಲ ಆಗುವುದಿಲ್ಲ. ಪ್ರಾರ್ಥನೆಗೆ ಫಲ ಖಂಡಿತವಾಗಿ ಸಿಗುತ್ತದೆ. ಹೀಗಾಗಿ ನಾನು ಧರ್ಮ ಯುದ್ಧ ಆರಂಭವಾಗುವ ಮುನ್ನ ಪ್ರಮುಖ ದೇವಸ್ಥಾನಗಳಿಗೆ ಭೇಟಿ ನೀಡಿ, ನಮ್ಮ ಪಕ್ಷ ಹಾಗೂ ರಾಜ್ಯದ ಜನರ ಪರವಾಗಿ ಪ್ರಾರ್ಥನೆ ಸಲ್ಲಿಸುತ್ತಿದ್ದೇನೆ. ಈ ನಾಡು ಸುಭಿಕ್ಷವಾಗಲಿ, ಒಳ್ಳೆಯ ಆಡಳಿತ ನೀಡುವ ಶಕ್ತಿ ನೀಡಲಿ ಎಂದು ಕೇಳಿಕೊಂಡಿದ್ದೇನೆ. ನಾವು ನುಡಿದಂತೆ ನಡೆದಿರುವುದು ಕೂಡ ನಮ್ಮ ಪ್ರಾರ್ಥನೆಯ ಫಲ.” ಎಂದು ಹೇಳಿದರು.