ಬೆಂಗಳೂರು:- ರೇಷನ್ ಕಾರ್ಡ್ ಒಂದು ಪ್ರಮುಖ ದಾಖಲೆಯಾಗಿದ್ದು, ಸಬ್ಸಿಡಿ ದರದಲ್ಲಿ ಆಹಾರ ಧಾನ್ಯ (ಪಡಿತರ) ಪಡೆಯಲು ಕಡ್ಡಾಯ ದಾಖಲೆಯಾಗಿದೆ. ಇದಲ್ಲದೆ, ನಿವಾಸ ಪ್ರಮಾಣಪತ್ರ, ಆದಾಯ ಪ್ರಮಾಣಪತ್ರ, ಚಾಲಕರ ಪರವಾನಗಿ, ಪ್ಯಾನ್ ಕಾರ್ಡ್ ಇತ್ಯಾದಿಗಳಿಗೆ ಅರ್ಜಿ ಸಲ್ಲಿಸುವಾಗ ಪಡಿತರ ಚೀಟಿಯನ್ನು ಗುರುತಿನ ಪುರಾವೆಯಾಗಿ ಬಳಸಲಾಗುತ್ತದೆ. ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಕರ್ನಾಟಕದಲ್ಲಿ ಪಡಿತರ ಚೀಟಿ ವಿತರಿಸುತ್ತದೆ.
ಹೀಗಾಗಿ ಹೊಸ ಪಡಿತರ ಚೀಟಿಗೆ ಅರ್ಜಿ ಸಲ್ಲಿಸುವವರು ಈ ಪ್ರಮುಖ ದಾಖಲೆಗಳನ್ನು ಇಟ್ಟುಕೊಳ್ಳುವುದು ಕಡ್ಡಾಯವಾಗಿದೆ.
ರಾಜ್ಯದ ನಾಗರೀಕರು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ www.ahara.kar.nic.in ಜಾಲತಾಣದ ಮೂಲಕ, ಹೊಸ ಪಡಿತರ ಚೀಟಿಗಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಕರ್ನಾಟಕ ಪಡಿತರ ಚೀಟಿ ಪಟ್ಟಿ ಯಲ್ಲಿ ಹೆಸರು ಇಲ್ಲದ ಎಲ್ಲಾ ಜನರು ಈಗ ಅಗತ್ಯವಿರುವ ದಾಖಲೆಗಳೊಂದಿಗೆ ಅರ್ಜಿಯನ್ನು ಸಲ್ಲಿಸಬಹುದು, ಜೊತೆಗೆ ಅರ್ಜಿಯ ಸ್ಥಿತಿಗತಿಯನ್ನು ಪರಿಶೀಲಿಸಬಹುದು. ಕರ್ನಾಟಕದಲ್ಲಿ ಹೊಸ ಎಪಿಎಲ್ / ಬಿಪಿಎಲ್ ಪಡಿತರ ಚೀಟಿಗೆ ( BPL, APL Ration Card ) ಹೇಗೆ ಅರ್ಜಿ ಸಲ್ಲಿಸಬಹುದು.? ಅದಕ್ಕೆ ಬೇಕಿರುವಂತ ದಾಖಲೆಗಳು ಯಾವುದು ಎನ್ನುವ ಬಗ್ಗೆ ಸಂಪೂರ್ಣ ಮಾಹಿತಿಗಾಗಿ ಮುಂದೆ ಓದಿ..
ಪಡಿತರ ಚೀಟಿಗಾಗಿ ಅರ್ಜಿ ಸಲ್ಲಿಸಲು ಬೇಕಿರುವ ಅಗತ್ಯ ದಾಖಲೆಗಳು
ವೋಟರ್ ಐಡಿ
ಆಧಾರ್ ಕಾರ್ಡ್
ವಯಸ್ಸಿನ ಪ್ರಮಾಣ ಪತ್ರ
ಡ್ರೈವಿಂಗ್ ಲೈಸೆನ್ಸ್
ಇತ್ತೀಚಿನ ಪಾರ್ಸ್ ಪೋರ್ಟ್ ಅಳತೆಯ ಭಾವಚಿತ್ರ
ಮೊಬೈಲ್ ಸಂಖ್ಯೆ
ಸ್ವಯಂ ಘೋಷಿತ ಪ್ರಮಾಣ ಪತ್ರ
ಈ ಮೇಲ್ಕಂಡ ದಾಖಲೆಗಳಿದ್ದಲೇ, ಆನ್ ಲೈನ್ ಮೂಲಕ ಹೊಸ ಪಡಿತರ ಚೀಟಿಗಾಗಿ ನೀವು ಅರ್ಜಿಯನ್ನು ಸಲ್ಲಿಸಬಹುದು. ಹಾಗಾದ್ರೇ ಅರ್ಜಿ ಸಲ್ಲಿಸೋದು ಹೇಗೆ ಎನ್ನುವ ಹಂತ ಈ ಕೆಳಗಿದೆ.
ಹೊಸ ಬಿಪಿಎಲ್, ಎಪಿಎಲ್ ಕಾರ್ಡ್ ಗಾಗಿ ಅರ್ಜಿ ಸಲ್ಲಿಸಲು ಅರ್ಹತೆ
ಪಡಿತರ ಚೀಟಿಗಾಗಿ ಅರ್ಜಿ ಸಲ್ಲಿಸುವವರು ಕರ್ನಾಟಕದ ಖಾಯಂ ನಿವಾಸಿಯಾಗಿರಬೇಕು.
ಈಗಾಗಲೇ ಪಡಿತರ ಚೀಟಿ ಹೊಂದಿರದೇ ಇರೋರು ಅರ್ಜಿ ಸಲ್ಲಿಸಬಹುದು
ಹೊಸದಾಗಿ ಮದುವೆಯಾದ ದಂಪತಿಗಳು, ಹೊಸ ಪಡಿತರ ಚೀಟಿಗಾಗಿ ಅರ್ಜಿ ಹಾಕಬಹುದು
ಕುಟುಂಬದ ಆದಾಯದ ಮೇಲೆ ಪಡಿತರ ಚೀಟಿ ಬಿಪಿಎಲ್, ಎಪಿಎಲ್ ಎಂಬುದು ನಿರ್ಧರಿತವಾಗಿರಲಿದೆ.