ವಿಜಯಪುರ:- ಆರ್ ಟಿ ಓ ಅಧಿಕಾರಿ ಮನೆ ಮೇಲೆ ಲೋಕಾಯುಕ್ತ ರೇಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಜಯಪುರ ಆರ್ ಟಿ ಓ ನಿವಾಸದಲ್ಲಿ ಅಪಾರ ಪ್ರಮಾಣದ ಚಿನ್ನಾಭರಣ, ಬೆಳ್ಳಿ, ವಿದೇಶಿ ಕರೆನ್ಸಿ ಪತ್ತೆಯಾಗಿದೆ.
ಜಮಖಂಡಿಯಲ್ಲಿ ಆರ್ ಟಿ ಓ ಇನ್ಸ್ಪೆಕ್ಟರ್ ಆಗಿರೋ ಷಣ್ಮುಖಪ್ಪ ನಿವಾಸದ ಮೇಲೆ ರೇಡ್ ನಡೆದಿತ್ತು. ರೇಡ್ ವೇಳೆ ಅಪಾರ ಪ್ರಮಾಣದ ಚಿನ್ನಾಭರಣ, ನಗದು, ವಿದೇಶಿ ಕರೆನ್ಸಿಗಳು ಪತ್ತೆಯಾಗಿದೆ. ಅಮೆರಿಕನ್ ಡಾಲರ್, ಪೌಂಡ್, ನೇಪಾಳ, ಮಲೇಶಿಯಾ ಸೇರಿ ಹಲವು ದೇಶಗಳ ಕರೆನ್ಸಿ ಪತ್ತೆಯಾಗಿದೆ. ಹಾಗೂ ಚಿನ್ನದ ನೆಕ್ಲೆಸ್, ಚಿನ್ನದ ಸರ, ಓಲೆ, ಬೆಳ್ಳಿಯ ಪಾತ್ರೆ ಸೇರಿದಂತೆ ಅಪಾರ ಪ್ರಮಾಣದ ಚಿನ್ನಾಭರಣ ಪತ್ತೆಯಾಗಿದೆ ಎಂದು ತಿಳಿದು ಬಂದಿದೆ.