ನವದೆಹಲಿ: ಡಿಸೇಲ್ ಹಾಗೂ ಪೆಟ್ರೋಲ್ ಬೆಲೆಯಲ್ಲಿ ಏರಿಕೆಯಾದರೆ ದಿನ ಬಳಕೆಯ ಎಲ್ಲಾ ವಸ್ತುಗಳ ಮೇಲೆ ಕ್ರಮೇಣ ಇದರ ಪರಿಣಾಮ ಬೀರುತ್ತದೆ. ಸರಕುಗಳ ಸಾಗಣೆಗೆ ಪೆಟ್ರೋಲ್ ಡಿಸೇಲ್ ಅಗತ್ಯವಾಗಿರುವುದರಿಂದ ಎಲ್ಲಾ ವಸ್ತುಗಳ ಬೆಲೆ ಗಗನಕ್ಕೇರುತ್ತದೆ. ಹೀಗಾಗಿ ಪ್ರತಿದಿನ ಎಲ್ಲರೂ ಪೆಟ್ರೋಲ್ ಡಿಸೇಲ್ ದರದ ಮೇಲೆ ಒಂದು ಕಣ್ಣಿಟ್ಟಿರುತ್ತಾರೆ. ದೇಶದ ಪ್ರಮುಖ ನಗರಗಳಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಗೆ ಕೆಲ ತಿಂಗಳಿಂದ ಬ್ರೇಕ್ ಬಿದ್ದಿದೆ.
ಆದರೂ, ಹಲವು ನಗರಗಳಲ್ಲಿ ಬೆಲೆಯಲ್ಲಿ ಏರಿಕೆ, ಇಳಿಕೆ ಕಂಡು ಬರುತ್ತಿದೆ. ಇನ್ನು, ಕಚ್ಚಾ ತೈಲ ದರ ಏರುತ್ತಿರುವುದನ್ನು ಗಮನಿಸಿದರೆ ಮತ್ತೆ ದೇಶದ ಎಲ್ಲ ಕಡೆ ಇಂಧನ ದರ ಮತ್ತಷ್ಟು ದುಬಾರಿಯಾಗುತ್ತದಾ ಎಂಬ ಆತಂಕವೂ ಮೂಡುತ್ತದೆ. ರಾಜ್ಯದಲ್ಲೂ ಸಹ ಜಿಲ್ಲಾ ಕೇಂದ್ರಗಳಲ್ಲಿ ಹಾಗೂ ಇತರೆಡೆ ಪ್ರತಿದಿನ ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ವ್ಯತ್ಯಾಸವಾಗುತ್ತಿದೆ. ರಾಜ್ಯದ ವಿವಿಧ ಜಿಲ್ಲೆಗಳಲ್ಲಿನ ಹಾಗೂ ದೇಶದ ಪ್ರಮುಖ ನಗರಗಳಲ್ಲಿನ ಪೆಟ್ರೋಲ್-ಡೀಸೆಲ್ ಬೆಲೆ ವಿವರ ಇಲ್ಲಿದೆ ನೋಡಿ.
ನಿಮಗೆ ಗೊತ್ತೇ..? ಶುಗರ್, ಕೊಲೆಸ್ಟ್ರಾಲ್, ತೂಕ ಕಂಟ್ರೋಲ್ʼನಲ್ಲಿರಲು ಹೆಸರು ಕಾಳು ಸೇವಿಸಬೇಕಂತೆ..!
ಮಹಾನಗರಗಳಲ್ಲಿ ಪೆಟ್ರೋಲ್ ಡೀಸೆಲ್ ಬೆಲೆ: ದೆಹಲಿಯಲ್ಲಿ ಪೆಟ್ರೋಲ್ ಬೆಲೆ 94.76 ರೂ ಮತ್ತು ಡೀಸೆಲ್ ಬೆಲೆ ಲೀಟರ್ಗೆ 87.66 ರೂ. ಮುಂಬೈನಲ್ಲಿ ಪೆಟ್ರೋಲ್ ಬೆಲೆ 104.19 ರೂ ಮತ್ತು ಡೀಸೆಲ್ ಬೆಲೆ ಲೀಟರ್ಗೆ 92.13 ರೂ. ಕೋಲ್ಕತ್ತಾದಲ್ಲಿ ಪೆಟ್ರೋಲ್ ಬೆಲೆ 103.93 ರೂ ಮತ್ತು ಡೀಸೆಲ್ ಬೆಲೆ ಲೀಟರ್ಗೆ 90.74 ರೂ. ಚೆನ್ನೈನಲ್ಲಿ ಪೆಟ್ರೋಲ್ ಬೆಲೆ 100.73 ರೂ ಮತ್ತು ಡೀಸೆಲ್ ಬೆಲೆ ಲೀಟರ್ಗೆ 92.32 ರೂ.
ಇತರ ನಗರಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಇತ್ತೀಚಿನ ಬೆಲೆ ನೋಯ್ಡಾ: ಲೀಟರ್ಗೆ ಪೆಟ್ರೋಲ್ 94.81 ರೂ. ಮತ್ತು ಡೀಸೆಲ್ ಲೀಟರ್ಗೆ 87.94 ರೂ. ಗುರುಗ್ರಾಮ: ಪೆಟ್ರೋಲ್ ಲೀಟರ್ಗೆ 95.18 ರೂ.ಮತ್ತು ಡೀಸೆಲ್ ಲೀಟರ್ಗೆ 88.03 ರೂ. ಬೆಂಗಳೂರು: ಲೀಟರ್ಗೆ ಪೆಟ್ರೋಲ್ 99.82 ರೂ. ಮತ್ತು ಡೀಸೆಲ್ 85.92 ರೂ. ಚಂಡೀಗಢ: ಪೆಟ್ರೋಲ್ ಲೀಟರ್ಗೆ 94.22 ರೂ. ಮತ್ತು ಡೀಸೆಲ್ ಲೀಟರ್ಗೆ 82.38 ರೂ. ಹೈದರಾಬಾದ್: ಪೆಟ್ರೋಲ್ ಲೀಟರ್ಗೆ 107.39 ರೂ. ಮತ್ತು ಡೀಸೆಲ್ ಲೀಟರ್ಗೆ 95.63 ರೂ ಜೈಪುರ: ಪ್ರತಿ ಲೀಟರ್ ಪೆಟ್ರೋಲ್ಗೆ 104.86 ರೂ. ಮತ್ತು ಡೀಸೆಲ್ ಲೀಟರ್ಗೆ 90.34 ರೂ. ಲಕ್ನೋ: ಪ್ರತಿ ಲೀಟರ್ ಪೆಟ್ರೋಲ್ 94.63 ರೂ. ಮತ್ತು ಡೀಸೆಲ್ ಲೀಟರ್ಗೆ 87.74 ರೂ.