ಬೆಳಗಾವಿ :- ಬೆಳಗಾವಿ ತನ್ನ ಕರ್ಮಭೂಮಿ ಎನ್ನುವ ಶೆಟ್ಟರ್ ಜಿಲ್ಲೆಗೆ ನೀಡಿರುವ ಕೊಡುಗೆಯಾದರೂ ಏನು? ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಪ್ರಶ್ನೆ ಮಾಡಿದ್ದಾರೆ.
Vijayendra: ಕೊಡಗು ಪ್ರತಾಪಸಿಂಹಗೆ ರಾಜ್ಯ ರಾಜಕಾರಣದಲ್ಲಿ ಉಜ್ವಲ ಭವಿಷ್ಯವಿದೆ: ವಿಜಯೇಂದ್ರ
ಈ ಸಂಬಂಧ ಮಾತನಾಡಿದ ಅವರು, ಶೆಟ್ಟರ್ ವಿರುದ್ಧ ಬೆಳಗಾವಿಯಲ್ಲಿ ನಡೆಯುತ್ತಿರುವ ಗೋ ಬ್ಯಾಕ್ ಶೆಟ್ಟರ್ ಅಭಿಯಾನದಿಂದ ಖಂಡಿತವಾಗಿಯೂ ತಮಗೆ ಲಾಭವಾಗಲಿದೆ ಎಂದು ಅವರು ಹೇಳಿದರು. ಬಿಜೆಪಿ ಕಾರ್ಯಕರ್ತರೇ ಶೆಟ್ಟರ್ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದಾರೆ ಅಂದರೆ ಅವರ ಸ್ವಾಭಿಮಾನಕ್ಕೆ ಪೆಟ್ಟು ಬಿದ್ದಿದೆ, ಅವರು ಮಾತ್ರವಲ್ಲ ಬೆಳಗಾವಿ ಕ್ಷೇತ್ರದ ಸ್ವಾಭಿಮಾನಕ್ಕೂ ಧಕ್ಕೆಯಾಗಿದೆ, ಬೆಳಗಾವಿ ತಮ್ಮ ಕರ್ಮಭೂಮಿ ಎಂದು ಹೇಳುವ ಅವರಿಗೆ ನಾಚಿಕೆಯಾಗಬೇಕು, ಬೆಳಗಾವಿ ಜಿಲ್ಲೆಗೆ ಅವರು ನೀಡಿರುವ ಕೊಡುಗೆದಾದರೂ ಏನು? ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದಾಗಲೂ ಅವರಿಂದ ಜಿಲ್ಲೆಗೆ ಪ್ರಯೋಜನವಾಗಿಲ್ಲ ಎಂದು ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದರು