ಕಿರುತೆರೆ ಮೂಲಕ ಬಣ್ಣದ ಲೋಕಕ್ಕೆ ಕಾಲಿಟ್ಟ ನಟಿ ಮೇಘಾ ಶೆಟ್ಟಿ ಕನ್ನಡ ಚಿತ್ರರಂಗದ ಭರವಸೆಯ ನಾಯಕಿಯಾಗಿದ್ದಾರೆ.
ಬ್ಯಾಕ್ ಟು ಬ್ಯಾಕ್ ಸಿನಿಮಾಗಳಲ್ಲಿ ಬ್ಯುಸಿಯಾಗಿರುವ ನಟಿ ಇದೀಗ ಮಸ್ತ್ ಫೋಟೋಶೂಟ್ ಮೂಲಕ ಮಿಂಚುತ್ತಿದ್ದಾರೆ.
ಜೊತೆ ಜೊತೆಯಲಿ ಅನು ಸಿರಿಮನೆ ಎಂದೇ ಖ್ಯಾತಿ ಪಡೆದಿರುವ ಮೇಘಾ ಶೆಟ್ಟಿ ಹೊಸ ಫೋಟೋಶೂಟ್ ಮಾಡಿಸಿದ್ದು, ಆ ಫೋಟೋಗಳನ್ನು ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.
ಸಿನಿಮಾಗಳಲ್ಲಿ ಬ್ಯುಸಿ ಆಗಿರುವ ಮೇಘಾ ಶೆಟ್ಟಿ, ಸೋಶಿಯಲ್ ಮೀಡಿಯಾದಲ್ಲೂ ಆ್ಯಕ್ಟಿವ್ ಆಗಿದ್ದಾರೆ. ಆಗಾಗ ಲೇಟೆಸ್ಟ್ ಫೋಟೋಗಳನ್ನು ಶೇರ್ ಮಾಡುತ್ತಿರುತ್ತಾರೆ. ಇದೀಗ ಬ್ಲ್ಯಾಕ್ ಡ್ರಸ್ ನಲ್ಲಿ ಮೇಘಾ ಫೋಟೋ ಶೂಟ್ ಮಾಡಿಸಿದ್ದಾರೆ.
ಕನ್ನಡದ ಮುದ್ದು ಮುಖದ ಚೆಲುವೆ ಮೇಘಾ ಶೆಟ್ಟಿ, ಸಿನಿಮಾಗಳಲ್ಲಿ ಬ್ಯುಸಿ ಆಗಿದ್ರು. ಜಾಹೀರಾತಿನಲ್ಲೂ ಆಗಾಗ ಮಿಂಚುತ್ತಿರುತ್ತಾರೆ.
ಗೋಲ್ಡನ್ ಸ್ಟಾರ್ ಗಣೇಶ್ ನಟನೆಯ ‘ತ್ರಿಬಲ್ ರೈಡಿಂಗ್’ ಚಿತ್ರದಲ್ಲಿ ನಾಯಕಿಯಾಗಿ ನಟಿಸುವ ಮೂಲಕ ಮೇಘಾ ಚಂದನವನ ಪ್ರವೇಶಿಸಿದರು. ನಂತರ ಡಾರ್ಲಿಂಗ್ ಕೃಷ್ಣ ಜೊತೆ ದಿಲ್ ಪಸಂದ್ ಚಿತ್ರದಲ್ಲಿ ನಟಿಸಿದರು.
ಇತ್ತೀಚಿಗಷ್ಟೇ ಕೈವ ಸಿನಿಮಾ ಮೂಲಕ ಪ್ರೇಕ್ಷಕರನ್ನು ರಂಜಿಸಿದ್ದ ಮೇಘಾ ಶೆಟ್ಟಿ, ಸದ್ಯ ವಿನಯ್ ರಾಜ್ಕುಮಾರ್ ಅಭಿನಯದ ಗ್ರಾಮಾಯಣ ಚಿತ್ರದಲ್ಲಿ ನಟಿಸುತ್ತಿದ್ದಾರೆ.
ಕಿರುತೆರೆ ಹಾಗೂ ಬೆಳ್ಳಿತೆರೆ ನಟಿ ಮೇಘಾ ಶೆಟ್ಟಿ ಸೈ ಎನಿಸಿಕೊಂಡಿದ್ದಾರೆ. ತಮ್ಮ ಅದ್ಭುತ ನಟನೆ ಮೂಲಕ ಜನರನ್ನು ಸೆಳೆಯುತ್ತಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಮೇಘಾ ಸಖತ್ ಆ್ಯಕ್ಟಿವ್ ಆಗಿದ್ದಾರೆ.