ಬೆಂಗಳೂರು:- ನಗರದಲ್ಲಿ ನಾಳೆ IPL ಪಂದ್ಯ ನಡೆಯಲಿದ್ದು, ಕೆಲವೆಡೆ ವಾಹನ ನಿಲುಗಡೆ ನಿಷೇಧ ಮಾಡಲಾಗಿದೆ.
ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಕೊಲ್ಕತ್ತಾ ನೈಟ್ ರೈಡರ್ಸ್ ನಾಳೆ ಪಂದ್ಯ ನಡೆಯಲಿದ್ದು, ಸಾಕಷ್ಟು ಜನರು ಸೇರುವ ಹಿನ್ನಲೆ ಮಧ್ಯಾಹ್ನ 3 ಘಂಟೆ ಯಿಂದ ರಾತ್ರಿ 11 ವರೆಗೆ ಸುಗಮ ಸಂಚಾರಕ್ಕಾಗಿ ಸೂಕ್ತ ವ್ಯವಸ್ಥೆಯನ್ನು ಮಾಡಲಾಗಿದೆ. ಕೆಲ ರಸ್ತೆಗಳಲ್ಲಿ ವಾಹನಗಳ ನಿಲುಗಡೆ ನಿಷೇಧವಿದ್ದರೆ, ಬೇರೆಡೆ ಸಾರ್ವಜನಿಕ ವಾಹನಗಳ ನಿಲುಗಡೆ ಸ್ಥಳಗಳನ್ನು ನಿಗದಿ ಮಾಡಲಾಗಿದೆ.
ಕಂಪ್ಲಿ: ಮನೆಗಳ್ಳರ ಸೆರೆ ಹಿಡಿಯುವಲ್ಲಿ ಯಶಸ್ವಿಯಾದ ಕಂಪ್ಲಿ ಪೊಲೀಸರು !
ಈ ರಸ್ತೆಗಳಲ್ಲಿ ವಾಹನಗಳ ನಿಲುಗಡೆ ನಿಷೇಧ
ಕ್ವೀನ್ಸ್ ರಸ್ತೆ, ಎಂಜಿ ರಸ್ತೆಯಿಂದ ಕಬ್ಬನ್ ರಸ್ತೆ, ರಾಜಭವನ ರಸ್ತೆ
ಸೆಂಟ್ರಲ್ ಸ್ಟ್ರೀಟ್ ರಸ್ತೆ, ಕಬ್ಬನ್ ರಸ್ತೆ, ಸೆಂಟ್ ಮಾರ್ಕ್ಸ್ ರಸ್ತೆ, ಮ್ಯೂಸಿಯಂ ರಸ್ತೆ
ಕಸ್ತೂರಿ ಬಾ ರಸ್ತೆ, ಅಂಬೇಡ್ಕರ್ ವೀದಿ ರಸ್ತೆ, ಟ್ರಿನಿಟಿ ವೃತ್ತ, ಲ್ಯಾವೆಲ್ಲೆ ರಸ್ತೆ
ವಿಶ್ವಲ್ ಮಲ್ಯ ರಸ್ತೆ, ಕಿಂಗ್ಸ್ ರಸ್ತೆ & ನೃಪತುಂಗ ರಸ್ತೆ
ಸಾರ್ವಜನಿಕ ವಾಹನಗಳ ನಿಲುಗಡೆ ಸ್ಥಳಗಳು ಹೀಗಿವೆ
ಸೆಂಟ್ ಜೋಸೆಫ್ ಇಂಡಿಯನ್ ಸ್ಕೂಲ್ ಮೈದಾನ
ಯು.ಬಿ ಸಿಟಿ ಪಾರ್ಕಿಂಗ್ ಸ್ಥಳ
ಬಿ.ಎಂ.ಟಿ.ಸಿ ಬಸ್ ನಿಲ್ದಾಣದ ಮೊದಲನೆ ಮಹಡಿ & ಓಲ್ಡ್ ಕೆ.ಜಿ.ಐ.ಡಿ ಬಿಲ್ಡಿಂಗ್
ಕಿಂಗ್ಸ್ ರಸ್ತೆ, (ಕಬ್ಬನ್ ಪಾರ್ಕ್ ಒಳಭಾಗ)
ಓಲಾ, ಉಬರ್, ಆಟೋ ಇತ್ಯಾದಿ ಕ್ಯಾಬ್ಗಳು ಪಿಕ್ ಆಪ್ ಮತ್ತು ಡ್ರಾಪ್ ಮಾಡುವ ಸ್ಥಳ ನಿಗದಿ ಮಾಡಲಾಗಿದೆ.
ಚಿನ್ನಸ್ವಾಮಿ ಮೈದಾನದಲ್ಲಿ ಐಪಿಎಲ್ ಪಂದ್ಯಾವಳಿ ಹಿನ್ನೆಲೆ ಪೊಲೀಸರು ಅಲರ್ಟ್ ಆಗಿದ್ದಾರೆ. ಪೊಲೀಸರ ನಿಯೋಜನೆ ಮಾಡಲಾಗಿದೆ. ಹೆಚ್ಚಿನ ದುಪ್ಪಟ್ಟು ಭದ್ರತೆ ಕಲ್ಪಿಸಲಾಗಿದೆ.
ಮಾರ್ಚ್ 29 ರಂದು ಆರ್ಸಿಬಿ ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ ಪಂದ್ಯ ನಡೆಯಲಿದೆ. ಈ ಭಾರಿ ಆರಂಭಿಕ ಪಂದ್ಯದಲ್ಲಿ ಸಿಎಸ್ಕೆ ವಿರುದ್ಧ ಸೋತಿದ್ದ ಆರ್ಸಿಬಿ, ಪಂಜಾಬ್ ಕಿಂಗ್ಸ್ ವಿರುದ್ಧ ತವರು ನೆಲೆದಲ್ಲಿ ನಡೆದ ಎರಡನೇ ಪಂದ್ಯದಲ್ಲಿ ರೋಚಕ ಗೆಲವು ಸಾಧಿಸಿತ್ತು.