ಡೆಲ್ಲಿ ವಿರುದ್ಧ 12 ರನ್ ಗಳಿಂದ ರಾಜಸ್ಥಾನ ರಾಯಲ್ಸ್ ತಂಡ ಗೆಲುವು ಸಾಧಿಸಿದೆ. ಗೆಲ್ಲಲು 186 ರನ್ಗಳ ಗುರಿಯನ್ನು ಪಡೆದ ಡೆಲ್ಲಿ 20 ಓವರ್ಗಳಲ್ಲಿ 5 ವಿಕೆಟ್ ನಷ್ಟಕ್ಕೆ 173 ರನ್ಗಳಿಸಿ ಸೋಲನ್ನು ಒಪ್ಪಿಕೊಂಡಿತು. ಸತತ ಎರಡು ಪಂದ್ಯಗಳನ್ನು ಗೆದ್ದ ರಾಜಸ್ಥಾನ 4 ಸಂಪಾದಿಸಿ ಅಂಕಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲೇ ಮುಂದುವರಿದಿದೆ.
ಸತತ ಹೆಚ್ಚಳ ಕಂಡ ಚಿನ್ನ – ಬೆಳ್ಳಿಯೂ ತುಸು ದುಬಾರಿ ; ಇಲ್ಲಿದೆ ಶುಕ್ರವಾರದ ದರಪಟ್ಟಿ
ಕೊನೆಯ 18 ಎಸೆತಗಳಲ್ಲಿ ಡೆಲ್ಲಿ ತಂಡಕ್ಕೆ 41 ರನ್ಗಳ ಅಗತ್ಯವಿತ್ತು. 18ನೇ ಓವರ್ನಲ್ಲಿ ಅವೇಶ್ ಖಾನ್ (Avesh Khan) 9 ರನ್, 19ನೇ ಓವರ್ನಲ್ಲಿ ಸಂದೀಪ್ ಶರ್ಮಾ (Sandeep Sharma) 15 ರನ್ ಕೊಟ್ಟರೆ ಕೊನೆಯ ಓವರ್ನಲ್ಲಿ ಅವೇಶ್ ಖಾನ್ ಕೇವಲ 4 ರನ್ ನೀಡಿದ್ದರಿಂದ ರಾಜಸ್ಥಾನ ಗೆಲುವು ಸಾಧಿಸಿತು.
ಡೆಲ್ಲಿ ಕ್ಯಾಪಿಟಲ್ಸ್ ಆರಂಭ ಉತ್ತಮವಾಗಿತ್ತು. ಮಿಚೆಲ್ ಮಾರ್ಷ್ 23 ರನ್ (12 ಎಸೆತ, 5 ಬೌಂಡರಿ) ಹೊಡೆದು ಔಟಾದರು. ನಂತರ ರಿಕಿ ಭುಯಿ ಸೊನ್ನೆ ಸುತ್ತಿದರು.
ನಾಯಕ ರಿಷಭ್ ಪಂತ್ 28 ರನ್ (26 ಎಸೆತ, 2 ಬೌಂಡರಿ, 1 ಸಿಕ್ಸರ್) ಹೊಡೆದರೆ, ಆರಂಭಿಕ ಆಟಗಾರ ಡೇವಿಡ್ ವಾರ್ನರ್ 49 ರನ್(34 ಎಸೆತ, 5 ಬೌಂಡರಿ, 3 ಸಿಕ್ಸರ್) ಸಿಡಿಸಿ ವಿಕೆಟ್ ಒಪ್ಪಿಸಿದರು. ಮಧ್ಯಮ ಕ್ರಮಾಂಕದಲ್ಲಿ ಟ್ರಿಸ್ಟಾನ್ ಸ್ಟಬ್ಸ್ ಮತ್ತು ಅಕ್ಷರ್ ಪಟೇಲ್ ಮುರಿಯದ 6ನೇ ವಿಕೆಟಿಗೆ 27 ಎಸೆತದಲ್ಲಿ 51 ರನ್ ಜೊತೆಯಾಟವಾಡಿದರೂ ತಂಡಕ್ಕೆ ಜಯ ದಕ್ಕಲಿಲ್ಲ. ಟ್ರಿಸ್ಟಾನ್ ಸ್ಟಬ್ಸ್ ಔಟಾಗದೇ 44 ರನ್ (23 ಎಸೆತ, 2 ಬೌಂಡರಿ, 3 ಸಿಕ್ಸರ್) ಹೊಡೆದರೆ ಅಕ್ಷರ್ ಪಟೇಲ್ ಔಟಾಗದೇ 15 ರನ್ (13 ಎಸೆತ, 1 ಬೌಂಡರಿ) ಹೊಡೆದರು.