ಸನ್ರೈಸರ್ಸ್ ಹೈದರಾಬಾದ್ (SRH) ವಿರುದ್ಧದ ಐಪಿಎಲ್ ಪಂದ್ಯದ ಸೋಲಿನ ನಂತರ ಮುಂಬೈ ಇಂಡಿಯನ್ಸ್ ಮಾಜಿ ನಾಯಕ ರೋಹಿತ್ ಶರ್ಮಾ ಮತ್ತು ಆಕಾಶ್ ಅಂಬಾನಿ ಗಂಭೀರ ಚರ್ಚೆ ನಡೆಸುತ್ತಿರುವ ಫೋಟೋ ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿದೆ. ಬುಧವಾರ ನಡೆದ ಐಪಿಎಲ್ ಪಂದ್ಯದಲ್ಲಿ ಸನ್ರೈಸರ್ಸ್ ಹೈದರಾಬಾದ್ ತಂಡದ ಬ್ಯಾಟ್ಸ್ಮನ್ಗಳು ಮುಂಬೈ ಇಂಡಿಯನ್ಸ್ ಬೌಲರ್ಗಳ ಬೆವರಿಳಿಸಿ ಬಿಟ್ಟಿದ್ದಾರೆ. ಮೊದಲು ಬ್ಯಾಟಿಂಗ್ ಮಾಡಿದ ಸನ್ರೈಸರ್ಸ್ ಹೈದರಾಬಾದ್ (SRH) 3 ವಿಕೆಟ್ಗೆ 277 ರನ್ ಗಳಿಸಿ ಐಪಿಎಲ್ನಲ್ಲಿ ಹೊಸ ದಾಖಲೆ ಬರೆದಿದೆ
Santosh Lad: ಬಿಜೆಪಿ ಸರ್ಕಾರ ದೇಶವನ್ನು ಹಾಳು ಮಾಡಿದೆ – ಸಂತೋಷ್ ಲಾಡ್!
ಸನ್ರೈಸರ್ಸ್ ಹೈದರಾಬಾದ್ (ಎಸ್ಆರ್ಎಚ್) ವಿರುದ್ಧ 31 ರನ್ಗಳ ಸೋಲಿನ ನಂತರ ಮಿಡ್ಫೀಲ್ಡ್ನಲ್ಲಿಯೇ ಮೀಟಿಂಗ್ ನಡೆಸಲಾಗಿದೆ.ಇಲ್ಲಿ ಗಂಭೀರ ವಿಷಯದ ಬಗ್ಗೆ ಚರ್ಚೆ ನಡೆದಿದೆ ಎಂದು ಹೇಳಲಾಗುತ್ತಿದೆ. ತಂಡದ ಮಾಜಿ ನಾಯಕ ರೋಹಿತ್ ಶರ್ಮಾ ಮತ್ತು ಹಾಲಿ ನಾಯಕ ಹಾರ್ದಿಕ್ ಪಾಂಡ್ಯ ಮತ್ತು ಮುಂಬೈ ಇಂಡಿಯನ್ಸ್ ಮಾಲೀಕ ಆಕಾಶ್ ಅಂಬಾನಿ ನಡುವಿನ ಮಾತುಕತೆಯ ಫೋಟೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿವೆ.