ಹಾಸನ:- ಜಿಲ್ಲೆಯ ಚನ್ನರಾಯಪಟ್ಟಣದ ಬಾಗೂರು ರಸ್ತೆ ಬಳಿ ಅಕ್ರಮ ಗೋಮಾಂಸ ಮಾರಾಟಕ್ಕಾಗಿ ಜಾನುವಾರುಗಳ ಮಾರಣಹೋಮ ನಡೆಸಿದ ಘಟನೆ ಜರುಗಿದೆ.
ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿದಾಗ 60 ಕ್ಕೂ ಹೆಚ್ಚು ಗೋವುಗಳನ್ನು ಹತ್ಯೆ ಮಾಡಿರುವುದು ಪತ್ತೆಯಾಗಿದೆ.
ಗೋವುಗಳ ಹತ್ಯೆ ವಿಚಾರ ತಿಳಿದ ಕೂಡಲೇ ಮಧ್ಯರಾತ್ರಿ ಸುಮಾರು 12.30ರ ವೇಳೆಗೆ ಪೊಲೀಸರು ದಾಳಿ ನಡೆಸಿದ್ದಾರೆ. ಅಷ್ಟರಲ್ಲೇ ಕರುಗಳು ಸೇರಿದಂತೆ 60ಕ್ಕೂ ಹೆಚ್ಚು ಜಾನುವಾರಗಳನ್ನು ಹತ್ಯೆ ಮಾಡಿ ರುಂಡಗಳನ್ನು ಬೇರ್ಪಡಿಸಿ, ಕೈಕಾಲುಗಳನ್ನು ಕತ್ತರಿಸಿ, ಚರ್ಮ ಸುಲಿದು ನೇತು ಹಾಕಲಾಗಿತ್ತು. ಸದ್ಯ, ಐದು ಗೋವುಗಳನ್ನು ಪೊಲೀಸರು ರಕ್ಷಣೆ ಮಾಡಿದ್ದು, ಸಾವಿರ ಕೆಜಿಗೂ ಅಧಿಕ ಗೋಮಾಂಸವನ್ನು ವಶಕ್ಕೆ ಪಡೆದಿದ್ದಾರೆ.