ಮೈಸೂರು: ಬಿಜೆಪಿ ಸಂಸದ ವಿ.ಶ್ರೀನಿವಾಸ್ ಪ್ರಸಾದ್ ಅವರನ್ನು ಕಾಂಗ್ರೆಸ್ ನಾಯಕರು ಭೇಟಿ ಮಾಡಿದ್ದಾರೆ. ಈ ಮೂಲಕ ರಾಜಕೀಯದಲ್ಲಿ ಯಾರೂ ಶತ್ರಗಳೂ ಅಲ್ಲ, ಮಿತ್ರರೂ ಅಲ್ಲ ಎಂಬುದನ್ನು ಮತ್ತೊಮ್ಮೆ ಸಾಬೀತುಪಡಿಸಿದ್ದಾರೆ. ಲೋಕಸಭಾ ಚುನಾವಣೆಯ ಕಾವು ದಿನದಿಂದ ದಿನಕ್ಕೆ ಏರುತ್ತಿದ್ದಂತೆ ಸಚಿವರಾದ ಡಾ.ಎಚ್.ಸಿ.ಮಹದೇವಪ್ಪ,
ವಾಸ್ತು ಪ್ರಕಾರ ಮನೆಯಲ್ಲಿ ಬಿದಿರುಗಳನ್ನು ಈ ರೀತಿಯಾಗಿ ಇಟ್ಟುಕೊಂಡರೆ ಅದೃಷ್ಟವಂತೆ.!
ಕೆ.ವೆಂಕಟೇಶ್ ನೇತೃತ್ವದ ಕಾಂಗ್ರೆಸ್ ನಾಯಕರ ತಂಡವು ಜಯಲಕ್ಷ್ಮೀಪುರಂನಲ್ಲಿರುವ ವಿ.ಶ್ರೀನಿವಾಸಪ್ರಸಾದ್ ನಿವಾಸಕ್ಕೆ ಭೇಟಿ ನೀಡಿದ್ದು ಕುತೂಹಲಕ್ಕೆ ಕಾರಣವಾಗಿದೆ. ಮೈಸೂರು-ಕೊಡಗು ಕಾಂಗ್ರೆಸ್ ಅಭ್ಯರ್ಥಿ ಎಂ.ಲಕ್ಷ್ಮಣ್, ಶಾಸಕ ಗಣೇಶ್ ಪ್ರಸಾದ್, ಮಾಜಿ ಶಾಸಕ ಡಾ. ಯತೀಂದ್ರ ಸಿದ್ದರಾಮಯ್ಯ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಡಾ.ಬಿ.ಜೆ.ವಿಜಯಕುಮಾರ್, ನಗರಾಧ್ಯಕ್ಷ ಮೂರ್ತಿ ಈ ಸಂದರ್ಭದಲ್ಲಿ ಇದ್ದರು.