ಬೆಂಗಳೂರು: ಗ್ರಾಮಾಂತರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಸಿ.ಎನ್. ಮಂಜುನಾಥ್ ವಿರುದ್ಧ ಡಾ.ಸಿ.ಎನ್. ಮಂಜುನಾಥ್ ಹೆಸರಿನ ಮತ್ತೊಬ್ಬ ಅಭ್ಯರ್ಥಿ ಸ್ಪರ್ಧೆ ಮಾಡುತ್ತಿದ್ದಾರೆ.
ಬೆಂಗಳೂರಿನಲ್ಲಿ ದಾಖಲೆ ಮಟ್ಟದ ತಾಪಮಾನ : ಇನ್ನೆರಡು ದಿನಗಳಲ್ಲಿ 40 ಡಿಗ್ರಿಗೆ ಏರಿಕೆ ಸಾಧ್ಯತೆ
ಖ್ಯಾತ ವೈದ್ಯ, ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲ್ಲೂಕಿನ ಚೊಳೇನಹಳ್ಳಿ ಗ್ರಾಮದ ಡಾ.ಸಿ.ಎನ್. ಮಂಜುನಾಥ್ ಬಿಜೆಪಿಯಿಂದ ಸ್ಪರ್ಧಿಸುತ್ತಿದ್ದಾರೆ. ಇದೀಗ ಅವರ ತಾಲ್ಲೂಕಿನವರೇ ಅದೇ ಕ್ಷೇತ್ರಕ್ಕೆ ಅದೇ ಹೆಸರಿನ ಮತ್ತೊಬ್ಬ ಡಾ.ಸಿ.ಎನ್. ಮಂಜುನಾಥ್ ಎಂಬವವರು ಚುನಾವಣಾ ಕಣಕ್ಕಿಳಿಯುವುದಾಗಿ ಘೋಷಿಸಿದ್ದಾರೆ.
ಡಾ. ಸಿ.ಎನ್.ಮಂಜುನಾಥ್ ಅವರಿಗೆ ಸ್ಪರ್ಧೆ ಒಡ್ಡಲು ಅದೇ ಹೆಸರಿನ ಗೌರವ ಡಾಕ್ಟರೇಟ್ ಮೂಲಕ ಹೆಸರಿನ ಮುಂದೆ ಡಾಕ್ಟರ್ ಹೊಂದಿರುವ ಡಾ.ಸಿ.ಎನ್.ಮಂಜುನಾಥ್ ಎಂಬುವವರು ಬಹುಜನ ಭಾರತ್ ಪಾರ್ಟಿಯಿಂದ ಸ್ಪರ್ಧಿಸಲು ನಿರ್ಧರಿಸಿದ್ದಾರೆ.