ದಕ್ಷಿಣ ಕನ್ನಡ: ಚಾಲಕನ ನಿಯಂತ್ರಣ ತಪ್ಪಿ ಕಾಂಪೌಂಡ್ಗೆ ಡಿಕ್ಕಿಯಾಗಿ ಕಾರು ಪಲ್ಟಿಯಾದ ಘಟನೆ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಗುರುವಾಯನಕೆರೆ ಬಳಿಯ ಶಕ್ತಿನಗರದಲ್ಲಿ ಜರುಗಿದೆ.
ಈ ವೇಳೆ ಚಾಲಕ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾನೆ. ಬೆಳ್ತಂಗಡಿ ಲಾಯಿಲ ನಿವಾಸಿ ಪ್ರೈಸ್ ಮ್ಯಾಥ್ಯೂ(32) ಮೃತ ದುರ್ದೈವಿ. ಬೆಳ್ತಂಗಡಿ ಕಡೆಯಿಂದ ಮೂಡುಬಿದಿರೆ ಕಡೆಗೆ ತೆರಳುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದೆ. ಸ್ಥಳಕ್ಕೆ ಬೆಳ್ತಂಗಡಿ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.