ಬೆಂಗಳೂರು:- ಅಮಿತ್ ಶಾ ಓರ್ವ ಗೂಂಡಾ ಎಂದು ಹೇಳಿಕೆ ನೀಡಿದ್ದ ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ದೂರು ನೀಡಿದ್ದಾರೆ.
ಗೃಹ ಸಚಿವ ಅಮಿತ್ ಶಾ ವಿರುದ್ಧ ಅವಹೇಳನಕಾರಿ ಹೇಳಿಕೆ ಮತ್ತು ನೀತಿ ಸಂಹಿತೆ ಇದ್ದರೂ ಬೆಂಗಳೂರಿನ ಶೇಷಾದ್ರಿಪುರಂನಲ್ಲಿರುವ ರಾಜೀವ್ ಗಾಂಧಿ ಪ್ರತಿಮೆ ಮುಚ್ಚದ ಹಿನ್ನೆಲೆ ಚುನಾವಣಾ ಆಯೋಗಕ್ಕೆ ಬಿಜೆಪಿಯ ಎಂಎಲ್ಸಿಗಳಾದ ರವಿಕುಮಾರ್, ಛಲವಾದಿ ನಾರಾಯಣಸ್ವಾಮಿ ದೂರು ನೀಡಿದ್ದಾರೆ.
Accident: ನಿಯಂತ್ರಣ ತಪ್ಪಿ ಕಾರ್ ಪಲ್ಟಿ; ಚಾಲಕ ಸಾವು, ಇಬ್ಬರಿಗೆ ಗಂಭೀರ ಗಾಯ
ದೂರು ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಪರಿಷತ್ನ ಬಿಜೆಪಿ ಸದಸ್ಯ ಎನ್.ರವಿಕುಮಾರ್, ಅಮಿತ್ ಶಾ ವೈಯಕ್ತಿಕ ವಿಚಾರದ ಬಗ್ಗೆ ಯತೀಂದ್ರ ಹೇಳಿಕೆ ನೀಡಿದ್ದಾರೆ. ಕ್ರಮಕ್ಕೆ ಆಗ್ರಹಿಸಿ ಚುನಾವಣಾ ಆಯೋಗಕ್ಕೆ ದೂರು ನೀಡಲಾಗಿದೆ. ಡಾ.ಯತೀಂದ್ರ ವಿರುದ್ಧ ಕ್ರಮಕೈಗೊಳ್ಳದಿದ್ದರೆ ಪ್ರತಿಭಟನೆ ಮಾಡುತ್ತೇವೆ ಎಂದು ಹೇಳಿದ್ದಾರೆ.