ಹೃದಯಾಘಾತದಿಂದ ಖ್ಯಾತ ಖಳನಟ ಡ್ಯಾನಿಯಲ್ ಬಾಲಾಜಿ ಸಾವನ್ನಪ್ಪಿದ್ದಾರೆ. ಡ್ಯಾನಿಯಲ್ ಅವರು ಸಣ್ಣ ವಯಸ್ಸಿಗೆ ನಿಧನ ಹೊಂದಿದ್ದು ಅನೇಕರಿಗೆ ಬೇಸರ ತರಿಸಿದೆ. ಅವರ ಅಗಲುವಿಕೆಯಿಂದ ಎಲ್ಲರೂ ಶಾಕ್ಗೆ ಒಳಗಾಗುವಂತೆ ಆಗಿದೆ.
ಡ್ಯಾನಿಯಲ್ ಬಾಲಾಜಿ ಅವರು ಅವರು ಪ್ರೊಡಕ್ಷನ್ ಮ್ಯಾನೇಜರ್ ಆಗಿ ಬಣ್ಣದ ಲೋಕದ ಜೊತೆ ನಂಟು ಬೆಳೆಸಿಕೊಂಡರು. ಅವರು ಕಮಲ್ ಹಾಸನ್ ಅವರ ಹಿಸ್ಟಾರಿಕ್ ಡ್ರಾಮಾ ‘ಮರುಢನಯಗಂ’ ಸಿನಿಮಾದಲ್ಲಿ ಪ್ರೊಡಕ್ಷನ್ ಮ್ಯಾನೇಜರ್ ಆಗಿದ್ದರು. ಈ ಸಿನಿಮಾ ಅರ್ಧಕ್ಕೆ ನಿಂತಿತು. ಡ್ಯಾನಿಯಲ್ ಬಾಲಾಜಿ ಅವರು ‘ಚಿತ್ತಿ’ ಹೆಸರಿನ ಧಾರಾವಾಹಿಯಲ್ಲೂ ನಟಿಸಿದ್ದರು
ನಂತರದ ದಿನಗಳಲ್ಲಿ ಬಾಲಾಜಿ ಅವರಿಗೆ ಕಮಲ್ ಹಾಸನ್ ಜೊತೆ ನಟಿಸೋ ಅವಕಾಶ ಸಿಕ್ಕಿತು. ಕಮಲ್ ಹಾಸನ್ ನಟನೆಯ ‘ವೆಟ್ಟೈಯಾಡು ವಿಲೈಯಾಡು’ ಸಿನಿಮಾದಲ್ಲಿ ವಿಲನ್ ಪಾತ್ರ ಮಾಡಿದ್ದರು. ಈ ಮೂಲಕ ಮೆಚ್ಚುಗೆ ಪಡೆದು ಬಂದರು.