ಬೆಂಗಳೂರು :- ಬಿಜೆಪಿ ಸೇರುವ ಬಗ್ಗೆ ಬೆಂಬಲಿಗರ ಜೊತೆ ಸಭೆ ನಡೆಸಿ ತೀರ್ಮಾನ ಮಾಡಲಾಗುತ್ತದೆ ಎಂದು ಸುಮಲತಾ ಅಂಬರೀಶ್ ಹೇಳಿದ್ದಾರೆ.
MP ಎಲೆಕ್ಷನ್ ನಂತರವೂ ನಮ್ಮ ಮೈತ್ರಿ ಮುಂದುವರಿಯಲಿದೆ -ಹೆಚ್ ಡಿ ದೇವೇಗೌಡ
ಈ ಸಂಬಂಧ ಮಾತನಾಡಿದ ಅವರು, ಮಂಡ್ಯದಲ್ಲಿ ಬಿಜೆಪಿಗೆ ಬೆಂಬಲ ನೀಡುವಂತೆ ಪಕ್ಷದ ವರಿಷ್ಟರು ಹೇಳುತ್ತಿದ್ದಾರೆ ಮತ್ತು ತನಗೆ ಸೂಕ್ತ ಸ್ಥಾನಮಾನ ಕಲ್ಪಿಸುವ ಭರವಸೆಯನ್ನೂ ನೀಡಿದ್ದಾರೆ. ನಿನ್ನೆ ತಮ್ಮನ್ನು ಬೇಟಿಯಾಗಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಸಹ ತನಗೆ ಅದೇ ಮಾತನ್ನು ಹೇಳಿದ್ದಾರೆ. ಆದರೆ ಬೆಂಬಲಿಗರು ಮಂಡ್ಯದಿಂದ ಸ್ಪರ್ಧಿಸುವಂತೆ ಹೇಳುತ್ತಿದ್ದಾರೆ ಎಂದು ಸುಮಲತಾ ಹೇಳಿದರು. ಇನ್ನೂ ಯಾವುದನ್ನೂ ನಿರ್ಧರಿಸಿಲ್ಲ, ಏಪ್ರಿಲ್ 3 ರಂದು ಕಾರ್ಯಕರ್ತರ ಜೊತೆ ಮತ್ತೊಂದು ಸಭೆ ನಡೆಸಿ ತಮ್ಮ ಅಂತಿಮ ನಿರ್ಧಾರ ಪ್ರಕಟಿಸುವುದಾಗಿ ಸುಮಲತಾ ಹೇಳಿದರು.