ಲಕ್ನೋದ ಅಟಲ್ ಬಿಹಾರಿ ವಾಜಪೇಯಿ ಏಕನಾ ಸ್ಟೇಡಿಯಂನಲ್ಲಿ ಇಂದು ಪಂಜಾಬ್ ಕಿಂಗ್ಸ್ ಮತ್ತು ಲಕ್ನೋ ಸೂಪರ್ ಜೈಂಟ್ಸ್ ಪಂದ್ಯ ನಡೆಯುತ್ತಿದ್ದು, ಮೊದಲು ಟಾಸ್ ಗೆದ್ದ ಲಕ್ನೋ ಬ್ಯಾಟಿಂಗ್ ಆಯ್ದು ಕೊಂಡಿದೆ.
ಐಪಿಎಲ್ 2024 ರ 11ನೇ ಪಂದ್ಯ ಇಂದು ಪಂಜಾಬ್ ಕಿಂಗ್ಸ್ ಮತ್ತು ಲಕ್ನೋ ಸೂಪರ್ ಜೈಂಟ್ಸ್ ನಡುವೆ ನಡೆಯುತ್ತಿದೆ. ಈ ಪಂದ್ಯ ಲಕ್ನೋದ ಅಟಲ್ ಬಿಹಾರಿ ವಾಜಪೇಯಿ ಏಕನಾ ಸ್ಟೇಡಿಯಂನಲ್ಲಿ ನಡೆಯುತ್ತಿದೆ. ಲಕ್ನೋ ಕಳೆದ ಪಂದ್ಯದಲ್ಲಿ ಸೋಲನ್ನು ಎದುರಿಸಬೇಕಾಯಿತು. ಹೀಗಾಗಿ ಪಂಜಾಬ್ ಕಿಂಗ್ಸ್ ವಿರುದ್ಧ ಲಕ್ನೋ ಗೆಲುವಿನ ಹಾದಿಗೆ ಮರಳಲು ಬಯಸಿದರೆ, ಈ ತಂಡದ ವಿರುದ್ಧ ಪ್ರತಿಯೊಂದು ವಿಭಾಗದಲ್ಲಿಯೂ ಉತ್ತಮ ಪ್ರದರ್ಶನ ನೀಡಬೇಕಾಗುತ್ತದೆ. ಇತ್ತ ಪಂಜಾಬ್, ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಗೆಲುವಿನೊಂದಿಗೆ ಸೀಸನ್ ಪ್ರಾರಂಭಿಸಿತ್ತು. ಆದರೆ ಮುಂದಿನ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ವಿರುದ್ಧ ಸೋಲನ್ನು ಎದುರಿಸಬೇಕಾಯಿತು. ಶಿಖರ್ ಧವನ್ ನೇತೃತ್ವದ ತಂಡ ಕೂಡ ಹಿಂದಿನ ಸೋಲನ್ನು ಮರೆತು ಈ ಪಂದ್ಯದಲ್ಲಿ ಉತ್ತಮ ಪ್ರದರ್ಶನ ನೀಡಲು ಬಯಸಿದೆ. ಪಂದ್ಯ ಮುಗಿದ ಬಳಿಕ ಗೆಲುವು ಯಾರಾದ್ದಾಗಲಿದೆ ಕಾದು ನೋಡಬೇಕು.