ಬೆಂಗಳೂರು:- ಬಿಜೆಪಿ ದೂರಿನ ಬೆನ್ನಲ್ಲೇ ವಾರ್ತಾ ಇಲಾಖೆ ಆಯುಕ್ತ ಹೇಮಂತ್ ನಿಂಬಾಳ್ಕರ್ ವರ್ಗಾವಣೆ ಮಾಡಲಾಗಿದೆ.
ಅದರಂತೆ, ಬಿಬಿಎಂಪಿ ಆರೋಗ್ಯ ವಿಭಾಗದ ವಿಶೇಷ ಆಯುಕ್ತರಾಗಿದ್ದ ಸೂರಳ್ಕರ್ ವಿಕಾಸ್ ಕಿಶೋರ್ ಅವರನ್ನು ವಾರ್ತಾ ಇಲಾಖೆ ಆಯುಕ್ತರನ್ನಾಗಿ ನೇಮಿಸಲಾಗಿದೆ.
ತಮ್ಮ ಕಚೇರಿಯಲ್ಲಿ ಪತ್ನಿ ಅಂಜಲಿ ನಿಂಬಾಳ್ಕರ್ ಪರ ಕೆಲಸ ಮಾಡುತ್ತಿದ್ದಾರೆ ಎಂದು ಆರೋಪಿಸಿ ಹೇಮಂತ್ ನಿಂಬಾಳ್ಕರ್ ವಿರುದ್ಧ ಛಲವಾದಿ ನಾರಾಯಣಸ್ವಾಮಿ ನೇತೃತ್ವದ ಬಿಜೆಪಿ ನಿಯೋಗವು ರಾಜ್ಯ ಚುನಾವಣಾ ಆಯೋಗಕ್ಕೆ ದೂರು ನೀಡಿತ್ತು. ಇದರ ಬೆನ್ನಲ್ಲೇ ಹೇಮಂತ್ ನಿಂಬಾಳ್ಕರ್ ಅವರನ್ನು ವರ್ಗಾವಣೆ ಮಾಡಲಾಗಿದೆ.
ಕಚೇರಿ ಉಪಯೋಗಿಸಿಕೊಂಡು ಕಾಂಗ್ರೆಸ್ಗೆ ಮತ ನೀಡುವಂತೆ ಹೇಳುತ್ತಿದ್ದಾರಂತೆ. ಹೀಗಾಗಿ ಹೇಮಂತ್ ನಿಂಬಾಳ್ಕರ್ ಕರ್ನಾಟಕದಲ್ಲಿ ಇದ್ದರೆ ಮತ್ತೆ ಪ್ರಭಾವ ಬೀರಬಹುದು ಎಂದು ಇದೀಗ ವರ್ಗಾವಣೆ ಮಾಡಲಾಗಿದೆ.