ಬೆಂಗಳೂರು:– ಏ.2ರಂದು ಕೇಂದ್ರ ಸಚಿವ ಅಮಿತ್ ಶಾ ಅವರು ರಾಜ್ಯ ಪ್ರವಾಸ ಕೈಗೊಂಡಿದ್ದು, ರಾಜ್ಯ ಬಿಜೆಪಿಯಲ್ಲಿನ ಬಂಡಾಯ ಶಮನಗೊಳಿಸಲು ಚಾಣಕ್ಯ ಎಂಟ್ರಿ ಕೊಟ್ಟಿದ್ದಾರೆ.
ಏಪ್ರಿಲ್ 2ರಂದು ಬೆಳಗ್ಗೆ 9 ಗಂಟೆಗೆ ಇಲ್ಲಿನ ಖಾಸಗಿ ಹೋಟೆಲ್ನಲ್ಲಿ ಬಿಜೆಪಿ-ಜೆಡಿಎಸ್ ಸಮನ್ವಯ ಸಭೆ ನಡೆಯಲಿದೆ. ಬಳಿಕ ಬೆಳಗ್ಗೆ 11 ಗಂಟೆಗೆ ನಡೆಯಲಿರುವ ಬೆಂಗಳೂರು ಉತ್ತರ, ದಕ್ಷಿಣ, ಕೇಂದ್ರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ. ಸಮಾವೇಶದಲ್ಲಿ 5 ಸಾವಿರಕ್ಕೂ ಹೆಚ್ಚು ಮಂದಿ ಭಾಗವಹಿಸುವ ಸಾಧ್ಯತೆಯಿದೆ ಎಂದು ಬಿಜೆಪಿ ಹೇಳಿಕೊಂಡಿದೆ.
ವಾರ್ತಾ ಮತ್ತು ಸಂಪರ್ಕ ಇಲಾಖೆ ಆಯುಕ್ತ ಹೇಮಂತ್ ನಿಂಬಾಳ್ಕರ್ ಎತ್ತಂಗಡಿ!
ಸಮಾವೇಶದ ಬಳಿಕ ಮಧ್ಯಾಹ್ನ 2 ಗಂಟೆಯಿಂದ 4 ಲೋಕಸಭಾ ಕ್ಷೇತ್ರಗಳ ಪ್ರಮುಖರ ಜೊತೆ ಸಭೆ ನಡೆಸಲಿದ್ದಾರೆ. ದಾವಣಗೆರೆ, ಚಿತ್ರದುರ್ಗ, ತುಮಕೂರು, ಚಿಕ್ಕಬಳ್ಳಾಪುರ ಕ್ಷೇತ್ರದ ಪ್ರಮುಖರ ಜೊತೆ ಸಭೆ ನಡೆಸಲಿದ್ದಾರೆ.
ಬಳಿಕ ಚನ್ನಪಟ್ಟಣಕ್ಕೆ ತೆರಳಲಿರೋ ಅಮಿತ್ ಶಾ, ಸಂಜೆ 6 ಗಂಟೆಗೆ ಮೈತ್ರಿ ಅಭ್ಯರ್ಥಿ ಡಾ.ಮಂಜುನಾಥ್ ಪರವಾಗಿ ಬೃಹತ್ ರೋಡ್ ಶೋ ನಡೆಸಲಿದ್ದಾರೆ. ಬಳಿಕ ಅಲ್ಲಿಯೇ ನಡೆಯುವ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ.
ಇನ್ನೂ ರಾಜ್ಯಕ್ಕೆ ಬಂದರೂ ಈಶ್ವರಪ್ಪ ಅವರೊಂದಿಗೆ ಸಂಧಾನ ಮಾತುಕತೆ ನಡೆಸದಿರಲು ಅಮಿತ್ ಶಾ ನಿರ್ಧರಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ