ತುಮಕೂರು: ಚುನಾವಣೆ ಮುಗಿದ ಮೇಲೇಯೂ ಬಿಜೆಪಿ-ಜೆಡಿಎಸ್ ಸಂಬಂಧ ಮುಂದುವರೆಯುತ್ತದೆ ಎಂದು ಜೆಡಿಎಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಹೆಚ್ ಡಿ ದೇವೇಗೌಡ ಅವರು, ಹೇಳಿದರು. ತುಮಕೂರಿನಲ್ಲಿ ನಡೆದ ಜಿಲ್ಲಾ ಮಟ್ಟದ ಜೆಡಿಎಸ್ ಮುಖಂಡರ ಸಭೆಯಲ್ಲಿ ಮಾತನಾಡಿದ ಅವರು, ಚುನಾವಣೆ ಮುಗಿದ ಮೇಲೇಯೂ ಬಿಜೆಪಿ-ಜೆಡಿಎಸ್ ಸಂಬಂಧ ಮುಂದುವರೆಯುತ್ತದೆ. ಈ ಸಂಬಂಧ ಕಾಪಾಡುಕೊಂಡು ಹೋಗುತ್ತೇವೆ. ನಮ್ಮ ಬಾಂಧವ್ಯ ತಾತ್ಕಾಲಿಕವಲ್ಲ.
ಈ ಬಾಂಧವ್ಯವನ್ನ ಮುಂದುವರೆಸಿಕೊಂಡು ಹೋಗುವ ಪ್ರಾಮಾಣಿಕ ಕೆಲಸ ಮಾಡಬೇಕು ಎಂದರು. ಯಾಕೆ ಕಾಂಗ್ರೆಸ್ ಈ ಹೀನಾಯ ಸ್ಥಿತಿ ತಲುಪಿದೆ, ಎಲ್ಲಿದೆ ಕಾಂಗ್ರೆಸ್? ಇಡೀ ಹಿಂದೂಸ್ತಾನದಲ್ಲಿ ಕಾಂಗ್ರೆಸ್ ನಾಲ್ಕು ಕಡೆ ಇದೆ. ಇಡೀ ದೇಶದಲ್ಲಿ ರಾಜಸ್ತಾನ್, ಮಧ್ಯ ಪ್ರದೇಶ, ತೆಲಂಗಾಣ, ಕರ್ನಾಟಕದಲ್ಲಿ ಮಾತ್ರ ಇದೆ ಎಂದರು. ಈ ಕರ್ನಾಟಕ ಸಮನ್ವಯ ಸಮಿತಿಯಲ್ಲಿ ನಾನು ಒಂದು ಶಬ್ಧ ಬಳಕೆ ಮಾಡಿದೆ.
ನಾನು ಯಾವತ್ತೂ ಕಟುವಾದ ಶಬ್ಧ ಬಳಕೆ ಮಾಡಲ್ಲ. ಜೆಡಿಎಸ್ ಎಲ್ಲಿದೆ ಅಂತಾ ಮೈಸೂರಿನಲ್ಲಿ ಗೌರವಾನ್ವಿತ ಮುಖ್ಯಮಂತ್ರಿ ಪ್ರಶ್ನೆ ಮಾಡುತ್ತಾರೆ. ಕುಮಾರಸ್ವಾಮಿಗೆ ಅವರ ಮಗನನ್ನ ಗೆಲ್ಲಿಸಲು ಆಗಲ್ಲ, ಕುಮಾರಸ್ವಾಮಿ ತಂದೆ ತುಮಕೂರಿನಲ್ಲಿ ನಿಂತಾಗ ಗೆಲ್ಲಿಸಲು ಆಗಿಲ್ಲ ಎಂದು ಹೇಳುತ್ತಿದ್ದಾರೆ ಎಂದರು. ಅಲ್ಲದೆ, 2019ರ ಸೋಲಿಗೆ ಕಾರಣ ಯಾರು ಅಂತ ಸೋಲಿನ ಪರಾಮರ್ಶೆ ಮಾಡಿದರು.