ಬೆಳಗಾವಿ: ಬೆಳಗಾವಿಯ ಹಿಂಡಲಗಾ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ಏಕಾಏಕಿ ದಾಳಿ ನಡೆಸಿ ದ್ದಾರೆ. ಹೌದು ಜೈಲಿನಲ್ಲಿ ಅಕ್ರಮ ತಡೆಗಟ್ಟುವ ನಿಟ್ಟಿನಲ್ಲಿ ಡಿಸಿಪಿ ರೋಹನ್ ಜಗದೀಶ್ ನೇತೃತ್ವದಲ್ಲಿ ಬೆಳಂಬೆಳಗ್ಗೆ ಜೈಲಿನ ಮೇಲೆ ದಾಳಿ ನಡೆಸಿದ್ದು, ಒಂದು ಗಂಟೆಗೂ ಹೆಚ್ಚು ಕಾಲ ತಪಾಸಣೆ ನಡೆಸಲಾಗಿದೆ.
ನಗರದ ಐದೂ ವಿಭಾಗದ ಎಸಿಪಿಗಳು ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದರು. ಈ ಹಿಂದೆ ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರಿಗೆ ಇದೇ ಜೈಲಿನಿಂದ ಜೀವ ಬೆದರಿಕೆ ಕರೆ ಮಾಡಿದ್ದ ಪ್ರಕರಣ ಬೆಳಕಿಗೆ ಬಂದಿತ್ತು. ಅಲ್ಲದೇ ಕೈದಿಗಳ ಗಲಾಟೆ, ಮೊಬೈಲ್ ಬಳಕೆ ಸೇರಿ ಬಹಳಷ್ಟು ಆರೋಪಗಳೂ ಕೇಳಿ ಬಂದಿವೆ.