ಐಪಿಎಲ್ 2024 ರ ಇಂದಿನ ಮೊದಲ ಪಂದ್ಯ ಗುಜರಾತ್ ಟೈಟಾನ್ಸ್ ಮತ್ತು ಸನ್ರೈಸರ್ಸ್ ಹೈದರಾಬಾದ್ ನಡುವೆ ಅಹಮದಾಬಾದ್ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯುತ್ತಿದೆ. ಪಂದ್ಯದಲ್ಲಿ ಸನ್ರೈಸರ್ಸ್ ಹೈದರಾಬಾದ್ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಲು ನಿರ್ಧರಿಸಿದೆ.
ಒಂದೆಡೆ ಗುಜರಾತ್ ಟೈಟಾನ್ಸ್ ತಂಡ ಕಳೆದ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಸೋಲು ಕಂಡರೆ, ಇನ್ನೊಂದೆಡೆ ಸನ್ ರೈಸರ್ಸ್ ಹೈದರಾಬಾದ್ ತಂಡ ಮುಂಬೈ ಇಂಡಿಯನ್ಸ್ ತಂಡವನ್ನು ಸೋಲಿಸಿತ್ತು. ಉಭಯ ತಂಡಗಳು ಇದುವರೆಗೆ ಎರಡು ಪಂದ್ಯಗಳನ್ನು ಆಡಿದ್ದು, ತಲಾ ಒಂದು ಪಂದ್ಯ ಗೆದ್ದಿವೆ. ಇದೀಗ ಉಭಯ ತಂಡಗಳು ಎರಡನೇ ಗೆಲುವಿನ ನಿರೀಕ್ಷೆಯಲ್ಲಿವೆ.
ಗುಜರಾತ್ ಟೈಟಾನ್ಸ್
ವೃದ್ಧಿಮಾನ್ ಸಹಾ (ವಿಕೆಟ್ ಕೀಪರ್), ಶುಭ್ಮನ್ ಗಿಲ್ (ನಾಯಕ), ಅಜ್ಮತುಲ್ಲಾ ಉಮರ್ಜಾಯ್, ಡೇವಿಡ್ ಮಿಲ್ಲರ್, ವಿಜಯ್ ಶಂಕರ್, ರಾಹುಲ್ ತೆವಾಟಿಯಾ, ರಶೀದ್ ಖಾನ್, ಉಮೇಶ್ ಯಾದವ್, ನೂರ್ ಅಹ್ಮದ್, ಮೋಹಿತ್ ಶರ್ಮಾ, ದರ್ಶನ್ ನಲ್ಕಂಡೆ.
ಸನ್ರೈಸರ್ಸ್ ಹೈದರಾಬಾದ್
ಮಯಾಂಕ್ ಅಗರ್ವಾಲ್, ಟ್ರಾವಿಸ್ ಹೆಡ್, ಅಭಿಷೇಕ್ ಶರ್ಮಾ, ಐಡೆನ್ ಮೆಕ್ಕ್ರೇಮ್, ಹೆನ್ರಿಚ್ ಕ್ಲಾಸೆನ್, ಅಬ್ದುಲ್ ಸಮದ್, ಶಹಬಾಜ್ ಅಹ್ಮದ್, ಪ್ಯಾಟ್ ಕಮಿನ್ಸ್, ಭುವನೇಶ್ವರ್ ಕುಮಾರ್, ಮಯಾಂಕ್ ಮಾರ್ಕಾಂಡೆ, ಜಯದೇವ್ ಉನದ್ಕಟ್.