ತುಮಕೂರು:- ಇಂದು ತ್ರಿವಿಧ ದಾಸೋಹಿ ಕರ್ನಾಟಕ ರತ್ನ ಲಿಂಗೈಕ್ಯ ಶಿವಕುಮಾರ ಶ್ರೀಗಳ 117ನೇ ಜನ್ಮ ಜಯಂತಿ ಹಿನ್ನೆಲೆ ತುಮಕೂರಿನ ಸಿದ್ದಗಂಗಾ ಮಠದಲ್ಲಿಸಕಲ ತಯಾರಿ ನಡೆಸಲಾಗುತ್ತಿದೆ.
ಶಿವಕುಮಾರ ಶ್ರೀಗಳ ಗದ್ದುಗೆಗೆ ವಿಶೇಷ ಅಲಂಕಾರ ಮಾಡಲಾಗಿದ್ದು, ವಿಶೇಷ ಪೂಜೆ ರುದ್ರಾಭಿಷೇಕ ಮಹಾಮಂಗಳಾರತಿ ನೆರವೇರಿಸಲಾಗುತ್ತಿದೆ. ಬೆಳಗ್ಗೆ 11 ಗಂಟೆಗೆ ಶ್ರೀ ಗೋಸಲಸಿದ್ದೇಶ್ವರ ವೇದಿಕೆಯಲ್ಲಿ ಕಾರ್ಯಕ್ರಮ ನಡೆಯಲಿದೆ. ಚುನಾವಣೆ ನೀತಿ ಸಂಹಿತೆ ಹಿನ್ನೆಲೆಯಲ್ಲಿ ರಾಜಕಾರಣಿಗಳು, ಜನಪ್ರತಿನಿಧಿಗಳು ಭಾಗಿಯಾಗುತ್ತಿಲ್ಲ.
ಸಿದ್ದಗಂಗಾ ಮಠದ ಸಿದ್ದಲಿಂಗ ಶ್ರೀಗಳು, ಸುತ್ತೂರು ಮಠದ ಶ್ರೀಗಳ ಸಾನಿಧ್ಯದಲ್ಲಿ ಕಾರ್ಯಕ್ರಮ ನಡೆಯಲಿದೆ. ಧಾರವಾಡ ಮುರುಘಾಮಠದ ಮಲ್ಲಿಕಾರ್ಜುನ ಶ್ರೀಗಳು,ಗದಗಿನ ವೀರಶೈವ ಪುಣ್ಯಶ್ರಮದ ಕಲ್ಲಯ್ಯ ಅಜ್ಜರವರು ಸೇರಿದಂತೆ ಅನೇಕ ಪೂಜ್ಯರು ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.
117ಮಕ್ಕಳಿಗೆ ಶಿವಕುಮಾರ ಶ್ರೀಗಳ ಹೆಸರು ನಾಮಕರಣ ಮಾಡಲಾಗುತ್ತಿದ್ದು, ನಾಮಕರಣ ಮಾಡಲು ಪೋಷಕರು ಹೆಸರು ನೋಂದಾಯಿಸಿದ್ದಾರೆ.
ಶಿವಕುಮಾರ ಶ್ರೀಗಳ ಗದ್ದಿಗೆ, ಮಠದ ಆವರಣಗಳನ್ನು ಫಲಪುಷ್ಪಗಳಿಂದ ವಿಶೇಷವಾಗಿ ಅಲಂಕಾರ ಮಾಡಲಾಗಿದ್ದು, ಸಾವಿರಾರು ಭಕ್ತರು ಮಠಕ್ಕೆ ಆಗಮನ ನಿರೀಕ್ಷೆ ಇದೆ. ಬರುವ ಭಕ್ತರಿಗೆ ಮಠದಲ್ಲಿ ಊಟದ ವ್ಯವಸ್ಥೆ ಮಾಡಲಾಗಿದೆ.