ತುಮಕೂರು: ಇಂದು ಲಿಂಗೈಕ್ಯ ಶಿವಕುಮಾರಸ್ವಾಮಿಗಳ 117ನೇ ಜನ್ಮದಿನೋತ್ಸವ ಹಿನ್ನೆಲೆ ಸಿದ್ದಗಂಗಾ ಮಠದಲ್ಲಿ ಶ್ರೀಗಳ ಹುಟ್ಟುಹಬ್ಬ ಆಚರಣೆ ಮಾಡಲಾಗುತ್ತಿದೆ. ಬೆಳಗ್ಗೆಯಿಂದ ಗದ್ದುಗೆ ವಿಶೇಷ ಪೂಜೆ ಸಲ್ಲಿಕೆಯಾಗುತ್ತಿದ್ದು, ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿದ ಸಚಿವ ಡಾ.ಜಿ.ಪರಮೇಶ್ವರ್ ಗದ್ದುಗೆ ದರ್ಶನ ಪಡೆದರು. ಶ್ರೀಗಳ ಗದ್ದುಗೆಗೆ ಪೂಜೆ ಸಲ್ಲಿಸಿ ಸಚಿವರು ಆಶಿರ್ವಾದ ಪಡೆದರು.
Ration Card: ಇಂದಿನಿಂದ ಹೊಸ ರೇಷನ್ ಕಾರ್ಡ್ʼಗೆ ಅರ್ಜಿ ಸಲ್ಲಿಕೆ ಆರಂಭ..! ಇಂತವರಿಗೆ ಮಾತ್ರ ಅವಕಾಶ
ಡಾ.ಶಿವಕುಮಾರ ಸ್ವಾಮೀಜಿ ಅವರ 117ನೇ ಜಯಂತಿ ನಡೀತಿದೆ. ಈ ಸಂದರ್ಭದಲ್ಲಿ ಭಕ್ತಿ ಪೂರ್ವಕವಾಗಿ ನಾನು ನಮನ ಸಲ್ಲಿಸಿದ್ದೇನೆ. ರಾಜ್ಯದ ಎಲ್ಲಾ ಭಾಗದ ಬಂದು ಮಕ್ಕಳು ವಿದ್ಯಾಭ್ಯಾಸ ಮಾಡ್ತಿದ್ದಾರೆ. ಲಕ್ಷಾಂತರ ಮಕ್ಕಳು ಜೀವನ ಕಲ್ಪಿಸಿಕೊಂಡಿದ್ದಾರೆ. ಎಲ್ಲಾ ಕೊಡುಗೆಗಳನ್ನು ಗುರುತಿಸಿ ಶ್ರೀಗಳಿಗೆ ಭಾರತರತ್ನ ಕೊಡಬೇಕು. ಆದರೆ ಕೇಂದ್ರ ಸರ್ಕಾರ ಯಾಕೋ ಏನೋ ತಲೆಕೆಡಿಸಿಕೊಳ್ಳುತ್ತಿಲ್ಲ ಎಂದು ಡಾ.ಜಿ.ಪರಮೇಶ್ವರ್ ಹೇಳಿದರು.