ಚಾಮರಾಜನಗರ: ಏಪ್ರಿಲ್ 3 ರಂದು ಚಾಮರಾಜನಗರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸುನಿಲ್ ಬೋಸ್ ನಾಮಪತ್ರ ಸಲ್ಲಿಕೆ ಮಾಡುತ್ತಿದ್ದು, ಕಾಂಗ್ರೆಸ್ ಅಭ್ಯರ್ಥಿ ನಾಮಪತ್ರ ಸಲ್ಲಿಸುವ ವೇಳೆ ಗಡಿ ಜಿಲ್ಲೆ ಚಾಮರಾಜನಗರಕ್ಕೆ ಸಿಎಂ ಸಿದ್ದರಾಮಯ್ಯ ಆಗಮಿಸಲಿದ್ದಾರೆ ಎಂದು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಪಿ.ಮರಿಸ್ವಾಮಿ ಹೇಳಿದ್ದಾರೆ. ಚಾಮರಾಜನಗರ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಬೆಳಗ್ಗೆ 10:35ಕ್ಕೆ ಚಾಮರಾಜನಗರ ಜಿಲ್ಲೆಗೆ ಸಿಎಂ ಭೇಟಿ ನೀಡಲಿದ್ದು,
ಕಾಂಗ್ರೆಸ್ ಅಭ್ಯರ್ಥಿ ಸುನೀಲ್ ಬೋಸ್ ನಾಮಪತ್ರ ಸಲ್ಲಿಕೆಯಲ್ಲಿ ಭಾಗಿಯಾಗಲಿದ್ದಾರೆ. ಇನ್ನೂ ಸಂಸದ ವಿ.ಶ್ರೀನಿವಾಸಪ್ರಸಾದ್ ಬೆಂಬಲಿಗ ಹಾಗೂ ಜಿ.ಪಂ. ಮಾಜಿ ಉಪಾಧ್ಯಕ್ಷ ಅಯ್ಯನಪುರ ಶಿವಕುಮಾರ್ ಹಾಗೂ ಶಾಸಕ ಎ.ಆರ್.ಕೃಷ್ಣಮೂರ್ತಿ ಸಹೋದರ ಜಿ.ಪಂ.ಮಾಜಿ ಸದಸ್ಯ ಎ.ಆರ್.ಬಾಲರಾಜು ಸೇರಿದಂತೆ ಹಲವರು ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ ಎಂದು ಪಿ.ಮರಿಸ್ವಾಮಿ ತಿಳಿಸಿದರು.