ತುಮಕೂರು: ಮಾಜಿ ಶಾಸಕ ಹೆಚ್ ನಿಂಗಪ್ಪ ಅವರನ್ನು ಭೇಟಿಯಾಗಿ ತಮ್ಮ ಪಕ್ಷಕ್ಕೆ ಬರುವಂತೆ ಜೆಡಿಎಸ್ ವರಿಷ್ಠ ಹೆಚ್ಡಿ ದೇವೇಗೌಡ ಅವರು ಆಹ್ವಾನ ನೀಡಿದ್ದರು. ಇದರ ಬೆನ್ನಲ್ಲೇ, ವೈಯಕ್ತಿಕ ಕಾರಣ ನೀಡಿ ನಿಂಗಪ್ಪ ಅವರು ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿದ್ದು, ಇದರ ಪ್ರತಿಯನ್ನು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರಿಗೆ ರವಾನಿಸಿದ್ದಾರೆ.
ಪ್ರತಿ ಚುನಾವಣೆಯಲ್ಲೂ ಪಕ್ಷಾಂತರ ಮಾಡುವ ಹೆಚ್.ನಿಂಗಪ್ಪ ಅವರು ಈ ಹಿಂದೆ ಜೆಡಿಎಸ್ ಪಕ್ಷದಿಂದ ಕಾಂಗ್ರೆಸ್ ಪಕ್ಷಕ್ಕೆ ಪಕ್ಷಾಂತರವಾಗಿದ್ದರು. ಇದೀಗ ಕಾಂಗ್ರೆಸ್ನಿಂದ ವಾಪಸ್ ಜೆಡಿಎಸ್ ಸೇರ್ಪಡೆಯಾಗುವ ಸಾಧ್ಯತೆ ಇದೆ.