ಮುಂಬೈ ಇಂಡಿಯನ್ಸ್ ತಂಡವು ರಾಜಸ್ಥಾನ ರಾಯಲ್ಸ್ ವಿರುದ್ಧ 6 ವಿಕೆಟ್ ಗಳ ಹೀನಾಯ ಸೋಲು ಕಂಡಿದೆ.
ವಾಂಖೆಡೆ ಸ್ಟೇಡಿಯಮ್ನಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಮುಂಬಯಿ ಇಂಡಿಯನ್ಸ್ ತಂಡ ಕಳಪೆ ಬ್ಯಾಟಿಂಗ್ ಪ್ರದರ್ಶನ ನೀಡಿ ನಿಗದಿತ 20 ಓವರ್ಗಳಲ್ಲಿ 9 ವಿಕೆಟ್ ನಷ್ಟಕ್ಕೆ 125 ರನ್ ಬಾರಿಸಿತು.
IPL 2024: ಇಂದು ಆರ್ಸಿಬಿ- ಲಕ್ನೋ ಫೈಟ್; ಪಂದ್ಯ ಎಷ್ಟು ಗಂಟೆಗೆ ಆರಂಭ? – ಇಲ್ಲಿದೆ ಡೀಟೈಲ್ಸ್!
ಪ್ರತಿಯಾಗಿ ಬ್ಯಾಟ್ ಮಾಡಿದ ರಾಜಸ್ಥಾನ್ ರಾಯಲ್ಸ್ ತಂಡ 15.3 ಓವರ್ಗಳಲ್ಲಿ 4 ವಿಕೆಟ್ ಕಳೆದುಕೊಂಡು 127 ರನ್ ಬಾರಿಸಿ ಭರ್ಜರಿ ಗೆಲುವು ಸಾಧಿಸಿತು. ಇದು ಹಾರ್ದಿಕ್ ಪಾಂಡ್ಯ ನೇತೃತ್ವದ ಮುಂಬಯಿ ಇಂಡಿಯನ್ಸ್ ಬಳಗಕ್ಕೆ ಹಾಲಿ ಆವೃತ್ತಿಯಲ್ಲಿ ಸತತ ಮೂರನೇ ಸೋಲಾಗಿದೆ.
ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಮುಂಬಯಿ ಇಂಡಿಯನ್ಸ್ ತಂಡ ಕಳಪೆ ಬ್ಯಾಟಿಂಗ್ ಪ್ರದರ್ಶನ ನೀಡಿ ನಿಗದಿತ 20 ಓವರ್ಗಳಲ್ಲಿ 9 ವಿಕೆಟ್ ನಷ್ಟಕ್ಕೆ 125 ರನ್ ಬಾರಿಸಿತು. ಪ್ರತಿಯಾಗಿ ಬ್ಯಾಟ್ ಮಾಡಿದ ರಾಜಸ್ಥಾನ್ ರಾಯಲ್ಸ್ ತಂಡ 15.3 ಓವರ್ಗಳಲ್ಲಿ 4 ವಿಕೆಟ್ ಕಳೆದುಕೊಂಡು 127 ರನ್ ಬಾರಿಸಿ ಭರ್ಜರಿ ವಿಜಯ ಸಾಧಿಸಿತು.
39 ಎಸೆತಗಳಲ್ಲಿ 54 ರನ್ ಬಾರಿಸಿದ ರಿಯಾನ್ ಪರಾಗ್ ಬ್ಯಾಟಿಂಗ್ನಲ್ಲಿ ತಂಡಕ್ಕೆ ನೆರವು ಕೊಟ್ಟರೆ, ಬೌಲಿಂಗ್ನಲ್ಲಿ ಟ್ರೆಂಟ್ ಬೌಲ್ಟ್ ಹಾಗೂ ಯಜ್ವೇಂದ್ರ ಚಹಲ್ ತಲಾ 3 ವಿಕೆಟ್ ಪಡೆದುಕೊಂಡು ಮಿಂಚಿದರು. ಇದು ರಾಜಸ್ಥಾನ ತಂಡಕ್ಕೆ ಹಾಲಿ ಆವೃತ್ತಿಯಲ್ಲಿ ಹ್ಯಾಟ್ರಿಕ್ ವಿಜಯವಾಗಿದೆ.