ಯಾದಗಿರಿ:- ಯಾದಗಿರಿ ಜಿಲ್ಲಾಸ್ಪತ್ರೆಯಲ್ಲಿ ವೈದ್ಯರ ನಿರ್ಲಕ್ಷ್ಯಕ್ಕೆ ರೋಗಿ ಬಲಿಯಾಗಿದ್ದಾನೆ.
ವಿಶ್ವನಾಥ್ ನಮ್ಮ ಸಹೋದರರಂತೆ, ಭಿನ್ನಾಭಿಪ್ರಾಯ ಇಲ್ಲ – ಬಿಜೆಪಿ ಅಭ್ಯರ್ಥಿ ಡಾ. ಕೆ ಸುಧಾಕರ್!
ವಾಂತಿ ಮತ್ತು ಉಸಿರಾಟದ ತೊಂದರೆ ಅನುಭವಿಸುತ್ತಿದ್ದ ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ವನದುರ್ಗ ಗ್ರಾಮದ ಭೀಮರಾಯ (60) ಎಂಬುವವರನ್ನು ಕುಟುಂಬಸ್ಥರು ಶಹಾಪುರ ತಾಲೂಕು ಆಸ್ಪತ್ರೆಗೆ ದಾಖಲಿಸಿದ್ದರು. ಇಲ್ಲಿ ವೈದ್ಯರು ಚಿಕಿತ್ಸೆ ನೀಡಿದ್ದು ಹೆಚ್ಚಿನ ಚಿಕಿತ್ಸೆಗೆ ಯಾದಗಿರಿ ಜಿಲ್ಲಾಸ್ಪತ್ರೆಗೆ ಕರೆದೊಯ್ಯಲು ಸೂಚನೆ ನೀಡಿದ್ದಾರೆ. ಅದರಂತೆ ರೋಗಿ ಭೀಮರಾಯ ಅವರ ಪುತ್ರ ತಕ್ಷಣವೇ ಯಾದಗಿರಿ ಜಿಲ್ಲಾಸ್ಪತ್ರೆಗೆ ತಂದೆಯನ್ನು ಕರೆದುಕೊಂಡು ಬಂದು ಸೇರಿಸಿದ್ದಾರೆ. ಆದರೆ ರೋಗಿ ಆಸ್ಪತ್ರೆಯಲ್ಲಿ ದಾಖಲಾಗಿ ಎರಡು ಗಂಟೆ ಕಳೆದರೂ ವೈದ್ಯರು ಚಿಕಿತ್ಸೆ ನೀಡಿಲ್ಲ. ಕಾಲಿಗೆ ಬಿದ್ದು ಅಂಗಲಾಚಿದರೂ ಚಿಕಿತ್ಸೆ ನೀಡದೆ ನಿರ್ಲಕ್ಷ್ಯ ತೋರಿದ್ದಾರೆ. ಕೊನೆಗೆ ರೋಗಿ ನರಳಿ ನರಳಿ ಆಸ್ಪತ್ರೆಯಲ್ಲಿಯೇ ಪ್ರಾಣ ಬಿಟ್ಟಿದ್ದಾರೆ.
ಚಿಕಿತ್ಸೆ ನೀಡದೆ ವೈದ್ಯರು ನಿರ್ಲಕ್ಷ್ಯ ಮಾಡಿದ್ದಾರೆಂದು ಭೀಮರಾಯ ಅವರ ಪುತ್ರ ಆರೋಪಿಸಿದ್ದಾರೆ.
ಆಸ್ಪತ್ರೆ ಮುಂದೆ ಶವ ಇಟ್ಟು ಆಕ್ರೋಶ ಹೊರ ಹಾಕಿದ್ದಾರೆ