ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಇಂದು ನಡೆಯುತ್ತಿರುವ IPL ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಲಕ್ನೋ ಸೂಪರ್ ಜೈಂಟ್ಸ್ ತಂಡವನ್ನು ಎದುರಿಸಲಿದೆ.
ಮೊದಲು ಟಾಸ್ ಗೆದ್ದ RCB ತಂಡವು ಬೌಲಿಂಗ್ ಆಯ್ದುಕೊಂಡಿದೆ. ಲಕ್ನೋ ಸೂಪರ್ ಜೈಂಟ್ಸ್ ಮೊದಲು ಬ್ಯಾಟಿಂಗ್ ಮಾಡಲಿದೆ.
Haveri: ಬೊಲೆರೊ ಡಿಕ್ಕಿ: ವಾಹನದಲ್ಲಿದ್ದ ಮೂವರು ಸೇರಿ 20 ಕುರಿಗಳು ಸಾವು!
ಇಂದಿನ ಪಂದ್ಯದಲ್ಲಿ ಆರ್ಸಿಬಿ ತನ್ನ ಪ್ಲೇಯಿಂಗ್ ಇಲೆವೆನ್ನಲ್ಲಿ ಒಂದು ಬದಲಾವಣೆ ಮಾಡಿಕೊಂಡಿದೆ. ಅದರಂತೆ ಅಲ್ಝಾರಿ ಜೋಸೆಫ್ ಸ್ಥಾನದಲ್ಲಿ ಎಡಗೈ ವೇಗಿ ರೀಸ್ ಟೋಪ್ಲಿ ಕಣಕ್ಕಿಳಿದಿದ್ದಾರೆ.
ಇಂಡಿಯನ್ ಪ್ರೀಮಿಯರ್ ಲೀಗ್ನ (IPL 2024) 15ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಲಕ್ನೋ ಸೂಪರ್ ಜೈಂಟ್ಸ್ ತಂಡಗಳು ಮುಖಾಮುಖಿಯಾಗಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದಿರುವ ಆರ್ಸಿಬಿ ತಂಡದ ನಾಯಕ ಫಾಫ್ ಡುಪ್ಲೆಸಿಸ್ ಬೌಲಿಂಗ್ ಆಯ್ದುಕೊಂಡಿದ್ದಾರೆ.
ಈ ಪಂದ್ಯಕ್ಕಾಗಿ ಆರ್ಸಿಬಿ ತನ್ನ ಪ್ಲೇಯಿಂಗ್ ಇಲೆವೆನ್ನಲ್ಲಿ ಒಂದು ಬದಲಾವಣೆ ಮಾಡಿಕೊಂಡಿದೆ. ಅದರಂತೆ ಅಲ್ಝಾರಿ ಜೋಸೆಫ್ ಸ್ಥಾನದಲ್ಲಿ ಎಡಗೈ ವೇಗಿ ರೀಸ್ ಟೋಪ್ಲಿ ಕಣಕ್ಕಿಳಿದಿದ್ದಾರೆ.
ಉಭಯ ತಂಡಗಳು ಇದುವರೆಗೆ 4 ಪಂದ್ಯಗಳಲ್ಲಿ ಮುಖಾಮುಖಿಯಾಗಿದೆ. ಈ ವೇಳೆ ಆರ್ಸಿಬಿ ತಂಡ 3 ಪಂದ್ಯಗಳಲ್ಲಿ ಜಯ ಸಾಧಿಸಿದೆ. ಇನ್ನು ಲಕ್ನೋ ಸೂಪರ್ ಜೈಂಟ್ಸ್ ಗೆದ್ದಿರುವುದು ಕೇವಲ 1 ಬಾರಿ ಮಾತ್ರ. ಅದು ಕೂಡ 1 ವಿಕೆಟ್ನ ರೋಚಕ ಜಯದೊಂದಿಗೆ ಎಂಬುದು ಇಲ್ಲಿ ಉಲ್ಲೇಖಾರ್ಹ.
ಅಂದರೆ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಆರ್ಸಿಬಿ ಎಲ್ಲಾ ರೀತಿಯಲ್ಲೂ ಮೇಲುಗೈ ಹೊಂದಿದೆ. ಇದಾಗ್ಯೂ ಕೆಎಲ್ ರಾಹುಲ್, ನಿಕೋಲಸ್ ಪೂರನ್ನಂತಹ ಸ್ಟಾರ್ ಆಟಗಾರರು ಲಕ್ನೋ ಸೂಪರ್ ಜೈಂಟ್ಸ್ ತಂಡದಲ್ಲಿದ್ದು, ಹೀಗಾಗಿ ಭರ್ಜರಿ ಪೈಪೋಟಿಯನ್ನು ನಿರೀಕ್ಷಿಸಬಹುದು.