ಬೆಂಗಳೂರು:- ಬೇಸಿಗೆ ರಜೆ ದಿನಗಳಲ್ಲೂ ಸರ್ಕಾರಿ ಶಾಲೆ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟ ಮುಂದುವರೆಸಲು ಸರ್ಕಾರ ನಿರ್ಧರಿಸಿದೆ.
1 ರಿಂದ 8ನೇ ತರಗತಿಯ ಮಕ್ಕಳಿಗೆ ಏಪ್ರಿಲ್ 11 ರಿಂದ ಮೇ 28ರ ವರೆಗೆ ರಜೆ ಬೇಸಿಗೆ ರಜೆ ಇದ್ದು, ಮಧ್ಯಾಹ್ನದ ಬಿಸಿಯೂಟ ವಿತರಿಸಲು ಸರ್ಕಾರ ಸಿದ್ಧತೆ ನಡೆಸಿದೆ.
ರೆಬೆಲ್ ಲೇಡಿಯ ರಾಜಕೀಯ ಭವಿಷ್ಯ ನಾಳೆ ನಿರ್ಧಾರ! – ಸುಮಲತಾ ಮುಂದಿರುವುದು ನಾಲ್ಕೇ ಆಯ್ಕೆ!
ಸರ್ಕಾರ ಈಗಾಗಲೇ ಬರ ಪೀಡಿತ ತಾಲ್ಲೂಕುಗಳ ಘೋಷಣೆ ಮಾಡಿದ್ದು, ಬರ ಪೀಡಿತ ತಾಲೂಕುಗಳಲ್ಲಿ ಬೇಸಿಗೆ ರಜೆಯಲ್ಲಿಯೂ ಸರ್ಕಾರಿ ಶಾಲಾ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟ ನೀಡಲಾಗುತ್ತದೆ.
2023ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ರಾಜ್ಯದ 31 ಜಿಲ್ಲೆಗಳ 236 ತಾಲ್ಲೂಕುಗಳ 223 ತಾಲ್ಲೂಕುಗಳನ್ನು ಬರ ಪಿಡೀತ ತಾಲ್ಲೂಗಳೆಂದು ಘೋಷಿಸಲಾಗಿದ್ದು, ಈ ಎಲ್ಲ ತಾಲೂಕುಗಳಲ್ಲಿ ಬೇಸಿಗೆ ರಜೆಯಲ್ಲಿ ಬಿಸಿಊಟ ನೀಡಲಾಗುತ್ತದೆ ಎಂದು ಹೇಳಲಾಗಿದೆ.