ಹುಬ್ಬಳ್ಳಿ: ಪ್ರಸಕ್ತ ಆರ್ಥಿಕ ವರ್ಷ 2024-25ನೇ ಸಾಲಿನ ಆಸ್ತಿ ತೆರಿಗೆಯನ್ನು ಪಾವತಿಸಲು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಬಂಪರ್ ಆಫರ್ ಮಾಡಿಕೊಟ್ಟಿದೆ. 5% ರಿಯಾಯಿತಿಯೊಂದಿಗೆ ತೆರಿಗೆ ಪಾವತಿಸಲು ಏಪ್ರೀಲ್ 1 ರಿಂದ 30ರ ವರೆಗೆ ಅವಕಾಶ ಕಲ್ಪಿಸಿದೆ.
ಎಲ್ಲಾ ವಲಯ ಕಚೇರಿಗಳಲ್ಲಿ ಬೆಳಗ್ಗೆ 9 ಗಂಟೆಯಿಂದ ಸಂಜೆ 6 ಗಂಟೆ ವರೆಗೆ ಆಸ್ತಿ ತೆರಿಗೆ ಚಲನ್ಗಳನ್ನ ವಿತರಿಸಲಾಗುತ್ತಿದೆ. ಸಾರ್ವಜನಿಕರು ಮನೆಯಲ್ಲಿಯೇ ಕುಳಿತು ತಮ್ಮ ಮೋಬೈಲ್ನಲ್ಲಿ ಹೆಚ್ಡಿಎಂಸಿ ಆ್ಯಪ್ (HDMC App) ಡೌನ್ಲೋಡ್ ಮಾಡಿಕೊಂಡು, ಆ್ಯಪ್ನಲ್ಲೂ ಆಸ್ತಿ ತೆರಿಗೆ ಪಾವತಿ ಮಾಡಬಹುದಾಗಿದೆ.
ಇಂತಹ ವಿದ್ಯಾರ್ಥಿಗಳಿಗೆ ಸಿಗಲಿದೆ ತಿಂಗಳಿಗೆ 12,400 ರೂ. ಸ್ಕಾಲರ್ ಶಿಪ್..! ಇಂದೇ ಅರ್ಜಿ ಸಲ್ಲಿಸಿ
ಸಾರ್ವಜನಿಕರು ಆಸ್ತಿ ತೆರಿಗೆಯನ್ನು 2024-25 ನೇ ಸಾಲಿನಲ್ಲಿ ಕೇವಲ ಹುಬ್ಬಳ್ಳಿ ಧಾರವಾಡ-1 (ಕರ್ನಾಟಕ ಒನ್ ) ಸೇವಾ ಕೇಂದ್ರಗಳ ಮುಖಾಂತರ ಅಥವಾ ಪರ್ಯಾಯ ವ್ಯವಸ್ಥೆಯಾಗಿ ಸಂದಾಯ ಮಾಡಲು http://www.hdmc.in ವೆಬ್ ಸೈಟ್ನಲ್ಲಿ ಎಲ್ಲ ವಿಧದ ಆನ್ಲೈನ್ ಪಾವತಿ ವ್ಯವಸ್ಥೆಗಳ ಮುಖಾಂತರ ಆಸ್ತಿ ಕರ ಸಂದಾಯ ಮಾಡಲು ಅವಕಾಶ ಕಲ್ಪಿಸಲಾಗಿದ್ದು, ಸಾರ್ವಜನಿಕರು ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕು.
ಹಿಂದಿನ ವರ್ಷದ ಆಸ್ತಿ ತೆರಿಗೆ ಬಾಕಿ ಪಾವತಿಸದಿದ್ದವರೂ ಸಹ ತಮ್ಮ ಆಸ್ತಿ ತೆರಿಗೆಯನ್ನು ಕೂಡಲೇ ಪಾವತಿಸಿ, ಪಾಲಿಕೆ ಕೈಗೊಳ್ಳಲಿರುವ ಅಭಿವೃದ್ಧಿ ಕಾರ್ಯಗಳಲ್ಲಿ ಜವಾಬ್ದಾರಿಯುತ ಪಾಲುದಾರರಾಗಿ ಎಂದು ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ಆಯುಕ್ತರಾದ ಡಾ.ಈಶ್ವರ ಉಳ್ಳಾಗಡ್ಡಿ ಅವರು ಪ್ರಕಟಣೆಯಲ್ಲಿ ಕೋರಿದ್ದಾರೆ.