ವಿಜಯಪುರ: ಆಕಸ್ಮಿಕ ವಿದ್ಯುತ್ ತಂತಿ ಸ್ಪರ್ಶಿಸಿ 17 ಕುರಿಗಳು ಸಾವನ್ನಪ್ಪಿರುವ ಘಟನೆ ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಡಂಬಳ ತಾಂಡಾದ ತೋಟದಲ್ಲಿ ನಡೆದಿದೆ.
ಕಾಂತವ್ವ ರಾಠೋಡ ಎಂಬುವರಿಗೆ ಸೇರಿದ ಕುರಿಗಳು ಸಾವನ್ನಪ್ಪಿದ್ದು, ಸ್ಥಳಕ್ಕೆ ಪಶು ಸಂಗೋಪನಾ ಇಲಾಖೆಯ ಅಧಿಕಾರಿಗಳು ಭೇಟಿ ಪರಿಶೀಲನೆ ನಡೆಸಿದ್ದಾರೆ. ಸಿಂದಗಿ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.