ಬೆಂಗಳೂರು:- ಸಿಲಿಕಾನ್ ಸಿಟಿ ಬೆಂಗಳೂರಿನ ಜೆ.ಪಿ ನಗರದಲ್ಲಿ ಪತ್ನಿಯ ಅಕ್ರಮ ಸಂಬಂಧ ಶಂಕಿಸಿ ಪತಿಯೇ ಹಲ್ಲೆ ನಡೆಸಿದ ಘಟನೆ ಜರುಗಿದೆ.
Kalaburgi:.ಆರ್ ಸಿಬಿ ಆಟಗಾರ್ತಿ ಶ್ರೇಯಾಂಕಾಗೆ ಅಭಿನಂದನೆ.. ಜಿಲ್ಲಾಡಳಿತದಿಂದ ಸನ್ಮಾನ
ಕಚೇರಿ ಕೆಲಸದ ವಿಚಾರವಾಗಿ ತನ್ನ ಸಹೋದ್ಯೋಗಿಯನ್ನು ಮನೆಗೆ ಕರೆಸಿಕೊಂಡು ಪತ್ನಿ ಮಾತನಾಡುತ್ತಿದ್ದರು. ಈ ವೇಳೆ ಹೊಗಡೆಯಿಂದ ಮನೆಗೆ ಬಂದ ಪತಿಗೆ ಶಾಕ್ ಆಗಿದ್ದು, ಪರಪುರಷನ ಜೊತೆ ಪತ್ನಿ ಕಂಡು ಅನುಮಾನದ ಹಿನ್ನಲೆ ಚಾಕುವಿನಿಂದ ಇರಿದು ಹಲ್ಲೆಗೈದಿದ್ದಾನೆ.
ಇನ್ನು ಈ ದಂಪತಿಗೆ ಇಬ್ಬರು ಮಕ್ಕಳು ಕೂಡ ಇದ್ದಾರೆ. ಇಬ್ಬರಿಗೂ ಅಕ್ರಮ ಸಂಬಂಧ ಶಂಕೆ ಹಿನ್ನಲೆ ಕತ್ತರಿ ಮತ್ತು ಚಾಕುವಿನಿಂದ ಹಲ್ಲೆಗೊಳಿಸಿದ್ದಾನೆ. ಹಲ್ಲೆಗೊಳಗಾದ ಮಹಿಳೆಗೆ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಆರೋಪಿಯನ್ನು ವಶಕ್ಕೆ ಪಡೆದು ಪೊಲೀಸರು ವಿಚಾರಣೆ ನಡೆಸಿದ್ದಾರೆ