ಮೈಸೂರು: ಬನ್ನಿ ಇಬ್ಬರು ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಚುನಾವಣೆಗೆ ನಿಲ್ಲೋಣ. ಯಾರು ಗೆಲುತ್ತಾರೆ ನೋಡೋಣ ಎಂದು ಸಿಎಂ ಸಿದ್ದರಾಮಯ್ಯ ಅವರಿಗೆ ಶಾಸಕ ಜಿಟಿ ದೇವೇಗೌಡ ಸವಾಲು ಹಾಕಿದ್ದಾರೆ. ಮೈಸೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಅಭಿವೃದ್ಧಿ ಅಂದರೆ ಏನೂ ಅಂತ ಗೊತ್ತಿಲ್ಲ. ಸಿದ್ದರಾಮಯ್ಯ ಅಭಿವೃದ್ಧಿ ಮಾಡದೆ ರಾಜಕೀಯದಲ್ಲಿ ಬೆಳೆದು ಬಂದಿದ್ದಾರೆ. ಚಾಮುಂಡೇಶ್ವರಿ ಕ್ಷೇತ್ರದಲ್ಲಿ ನೀವು ಮಾಡಿದ ಅಭಿವೃದ್ಧಿ ಕಾರ್ಯದ ಶ್ವೇತ ಪತ್ರ ಹೊರಡಿಸಿ.
Child Falls Into Borewell: ಕೊಳವೆ ಬಾವಿಗೆ ಬಿದ್ದ ಕಂದನ ನರಳಾಟ..! ಕ್ಯಾಮೆರಾದಲ್ಲಿ ಸೆರೆಯಾಯ್ತು ಮಗುವಿನ ಕಾಲು
ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ವೇಳೆ ನಾನು ಜೆಡಿಎಸ್ ಪರ ಪ್ರಚಾರಕ್ಕೆ ಹೋಗಲಿಲ್ಲ. ಅದಕ್ಕಾಗಿ ಆಗ ನೀವು ಗೆದ್ದರಿ. ನನ್ನನ್ನು ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸೋಲಿಸಲು ಎಷ್ಟು ಸಲ ಪ್ರಯತ್ನ ಪಟ್ಟಿದ್ದೀರಿ. ನನ್ನ ಕಾಯೋಕೆ ದೈವವಿದೆ, ಧರ್ಮವಿದೆ. ಅದು ಹೇಗೆ ನೀವು ನನ್ನನ್ನು ಸೋಲಿಸ್ತಿರಿ. ನೀವು ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸೋತ ಮೇಲೆ ಮುಗಿದು ಹೋಯ್ತು. ಯಾಕೆ ಪದೇ ಪದೇ ಹೀಗೆ ಮಾತಾಡುತ್ತೀರಿ ಎಂದು ಪ್ರಶ್ನಿಸಿದರು.