ಪ್ರಕಾಶ್ ರಾಜ್ ಅವರು ಇಂದು ಮಧ್ಯಾಹ್ನ 3 ಗಂಟೆಗೆ ಭಾರತೀಯ ಜನತಾ ಪಕ್ಷಕ್ಕೆ ಸೇರುತ್ತಾರೆ ಎಂದು ಸಾಮಾಜಿಕ ಜಾಲತಾಣದಲ್ಲಿ ಬಳಕೆದಾರರೊಬ್ಬರು ಪೋಸ್ಟ್ ಮಾಡಿದ್ದಾರೆ. ಅದಕ್ಕೆ ಪ್ರಕಾಶ್ ರಾಜ್ ಪ್ರತಿಕ್ರಿಯೆ ನೀಡಿದ್ದಾರೆ. ಅವರು ಪ್ರಯತ್ನಿಸಿದ್ದಾರೆ ಅಂತ ನಾನು ಭಾವಿಸಿದ್ದೇನೆ. ನನ್ನನ್ನು ಕೊಂಡುಕೊಳ್ಳುವಷ್ಟು ಅವರು ಸೈದ್ಧಾಂತಿಕವಾಗಿ ಶ್ರೀಮಂತವಾಗಿಲ್ಲ ಎಂಬುದು ಅವರಿಗೆ ಅರ್ಥ ಆಗಿರಬೇಕು. ನಿಮ್ಮ ಅಭಿಪ್ರಾಯವೇನು ಸ್ನೇಹಿತರೇ. ಜಸ್ಟ್ ಆಸ್ಕಿಂಗ್ ಎಂದು ಪ್ರಕಾಶ್ ರಾಜ್ ರಿಯಾಕ್ಟ್ ಮಾಡಿದ್ದಾರೆ
ಅತ್ಯಾಚಾರ ಪ್ರಕರಣ: ತಲೆಮರೆಸಿಕೊಂಡಿದ್ದ ಅತ್ಯಾಚಾರ ಪ್ರಕರಣದ ಆರೋಪಿ ಪಾದ್ರಿ ಅರೆಸ್ಟ್!
ಈ ಮೂಲಕ ಬಿಜೆಪಿ ಮೂಲಕ ರಾಜಕೀಯ ಎಂಟ್ರಿ ಕುರಿತು ಹಬ್ಬಿರುವ ಸುದ್ದಿಗೆ ಪ್ರಕಾಶ್ ರಾಜ್ ಸ್ಪಷ್ಟನೆ ನೀಡಿದ್ದಾರೆ. ಬಿಜೆಪಿ ಪಕ್ಷಕ್ಕೆ ಸೇರುವ ಸುದ್ದಿ ಸುಳ್ಳು ಎಂಬುದನ್ನು ಸ್ಪಷ್ಟಪಡಿಸಿದ್ದಾರೆ.